ಸಂಸದ ಡಿ.ಕೆ. ಸುರೇಶ್ ವಿರುದ್ಧ ಮುಂಡಗೋಡ ಬಿಜೆಪಿಗರ ಆಕ್ರೋಶ, ಪ್ರತಿಭಟನೆ‌..!

ಮುಂಡಗೋಡ: ಪಟ್ಟಣದಲ್ಲಿ ಇಂದು ಇಲ್ಲಿನ ಬಿಜೆಪಿ ಕಾರ್ಯಕರ್ತರು ಡಿ.ಕೆ.ಸುರೇಶ್ ವಿರುದ್ಧ ಪ್ರತಿಭಟನೆ ಕೈಗೊಂಡ್ರು. ಕೆಡಿ- ಡಿಕೆ ಅಂತಾ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ರು‌

ರಾಮನಗರದಲ್ಲಿ ಡಿ.ಕೆ. ಸುರೇಶ್ ಹಾಗೂ ಸಚಿವ ಅಶ್ವಥ್ ನಾರಾಯಣ್ ನಡುವೆ ನಡೆದ ಮಾತಿನ ಚಕಮಿಕಿಯಲ್ಲಿ, ಡಿ.ಕೆ.ಸುರೇಶ್ ಗೂಂಡಾವರ್ತನೆ ತೋರಿಸಿದ್ದಾರೆ ಅಂತಾ ಆರೋಪಿಸಿ, ಈ ಸಂಬಂಧ ರಾಜ್ಯಾಧ್ಯಂತ ಇಂದು ಬಿಜೆಪಿ ಪ್ರತಿಭಟನೆ ನಡೆಸುತ್ತಿದೆ. ಅದ್ರಂತೆ ಮುಂಡಗೋಡ ಪಟ್ಟಣದ ಶಿವಾಜಿ ಸರ್ಕಲ್ ನಲ್ಲಿ ಬಿಜೆಪಿ ಕಾರ್ಯಕರ್ತರು ಡಿ.ಕೆ.ಸುರೇಶ್ ಭಾವಚಿತ್ರ ಹಿಡಿದು ಧಿಕ್ಕಾರ ಕೂಗಿದ್ರು. ಈ ವೇಳೆ ತಾಲೂಕಿನ ಹಿರಿಯ ಬಿಜೆಪಿ ಮುಖಂಡರುಗಳು, ಕಾರ್ಯಕರ್ತರು ಭಾಗವಹಿಸಿದ್ರು.

error: Content is protected !!