ಮುಂಡಗೋಡ: ಪಟ್ಟಣದ ಶಿರಸಿ ರಸ್ತೆಯ ಲೊಯೊಲಾ ಶಾಲೆಯ ಹತ್ತಿರ ಭಾರೀ ದುರ್ಘಟನೆ ನಡೆದಿದೆ. ಪಾದಾಚಾರಿ ಮಹಿಳೆಯೋರ್ವಳಿಗೆ ಮಾರುತಿ ಇಕೋ ವಾಹನ ಡಿಕ್ಕಿ ಹೊಡೆದ ಪರಿಣಾಮ ಮಹಿಳೆ ಸ್ಥಳದಲ್ಲೇ ಮೃತಪಟ್ಟಿದ್ದಾಳೆ.

ಕರಗಿನಕೊಪ್ಪ ಗ್ರಾಮದ ಲೋಕವ್ವ ಧರ್ಮಣ್ಣ ಲಮಾಣಿ(50) ಅಪಘಾತದಲ್ಲಿ ಮೃತಪಟ್ಟ ಮಹಿಳೆಯಾಗಿದ್ದಾಳೆ. ಶಿರಸಿ ಕಡೆಯಿಂದ ಬರುತ್ತಿದ್ದ ಮಾರುತಿ ಇಕೊ ವಾಹನ, ಮುಂಡಗೋಡ ಕಡೆಯಿಂದ ಕಾಲ್ನಡಿಗೆಯಲ್ಲೇ ಬರುತ್ತಿದ್ದ ಮಹಿಳೆಗೆ ಡಿಕ್ಕಿಯಾಗಿದೆ. ಪರಿಣಾಮ ಮಹಿಳೆ ಸ್ಥಳದಲ್ಲೇ ಮೃತಪಟ್ಟಿದ್ದಾಳೆ. ಸದ್ಯ ಸ್ಥಳಕ್ಕೆ ಮುಂಡಗೋಡ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ.

ಫುಲ್ ಟ್ರಾಫಿಕ್ ಜಾಮ್..!
ಇನ್ನು ಅಪಘಾತ ಸಂಭವಿಸಿದ ನಂತರ ಶಿರಸಿ ರಸ್ತೆಯಲ್ಲಿ ಕೆಲಹೊತ್ತು ಟ್ರಾಫಿಕ್ ಜಾಮ್ ಉಂಟಾಗಿತ್ತು. ನೂರಾರು ವಾಹನಗಳು ಸಾಲುಗಟ್ಟಿ ನಿಂತಿದ್ದವು. ಹೀಗಾಗಿ ಪೊಲೀಸರು ಟ್ರಾಫಿಕ್ ನಿಯಂತ್ರಿಸಲು ಹರಸಾಹಸ ಪಡಬೇಕಾಯಿತು.

error: Content is protected !!