ಮುಂಡಗೋಡ: ತಾಲೂಕಿನ ಪ್ರಸಿದ್ಧ ಪ್ರವಾಸಿ ತಾಣವಾಗಿ ಗುರುತಿಸಿಕೊಂಡಿರೋ ಟಿಬೇಟಿಯನ್ ಕಾಲೋನಿಗಳಲ್ಲಿ ಕೋವಿಡ್ ಸದ್ಯ ಮತ್ತೆ ತನ್ನ ಅಟ್ಟಹಾಸ ಶುರು ಮಾಡಿದೆ.. ಹೀಗಾಗಿ, ಸದ್ಯ ಕಾಲೋನಿಯಲ್ಲಿ ಬಹುತೇಕ ಸ್ತಬ್ದ ವಾತಾವರಣ ನಿರ್ಮಾಣವಾಗಿದೆ.

ಕಳೆದ ಕೆಲ ವಾರದ ಹಿಂದೆ ಮೊದಲೇಲ್ಲ ವಾರಕ್ಕೆ ಕಡಿಮೆ ಪ್ರಮಾಣದಲ್ಲಿ ಪಾಸಿಟಿವ್ ಪ್ರಕರಣಗಳು ದಾಖಲಾಗುತ್ತಿದ್ದವು. ಆದ್ರೆ ಸದ್ಯ ಪಾಸಿಟಿವ್ ಪ್ರಕರಣಗಳ ಸಂಖ್ಯೆ ಜಾಸ್ತಿಯಾಗಿದೆ. ಇಲ್ಲಿ ಈಗ ಪಾಸಿಟಿವ್ ಪ್ರಕರಣಗಳ ಸಂಖ್ಯೆ ಅರ್ಧಶತಕ ದಾಟಿದೆ. ಅದ್ರಲ್ಲೂ ಟಿಬೇಟಿಯನ್ ಕಾಲೋನಿಯ STS ಶಾಲೆಯಲ್ಲಿ 16 ವಿದ್ಯಾರ್ಥಿಗಳಿಗೆ ಪಾಸಿಟಿವ್ ದೃಢಪಟ್ಟಿರೋದು ಆತಂಕಕ್ಕೆ ಕಾರಣವಾಗಿದೆ. ಹೀಗಾಗಿ ಇಡೀ ಟಿಬೇಟಿಯನ್ ಕಾಲೋನಿಯ ಗಲ್ಲಿಗಳು ಈಗ ಭಿಕೋ ಅಂತಿವೆ. ಜನರು ಹೊರಗಡೆ ಅನಗತ್ಯ ತಿರುಗುವುದನ್ನು ನಿಲ್ಲಿಸಿದ್ದಾರೆ.

error: Content is protected !!