ಮುಂಡಗೋಡ: ತಾಲೂಕಿನ ಪಾಳಾ ಗ್ರಾಮದಲ್ಲಿ ಮಾನಸಿಕ ವೇದನೆಯಿಂದ ಬಳಲುತ್ತಿದ್ದ ಮಹಿಳೆಯೊಬ್ಬಳು ವಿಷಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.
ಪಾಳಾ ಗ್ರಾಮದ ಗಂಗವ್ವ ಕೋಂ ಇಂದ್ರಪ್ಪ ಇಂಗಳೆ (60), ಎಂಬುವವಳೆ ಆತ್ಮಹತ್ಯೆ ಮಾಡಿಕೊಂಡ ಮಹಿಳೆಯಾಗಿದ್ದಾಳೆ ಇವಳು ಕಳೆದ 17 ವರ್ಷಗಳಿಂದ ಮಾನಸಿಕ ಕಾಯಿಲೆಯಿಂದ ಬಳಲುತ್ತಿದ್ದವಳು, ಯಾವುದೋ ವಿಷಯವನ್ನು ಮನಸ್ಸಿಗೆ ಹಚ್ಚಿಕೊಂಡು ಜ. 19 ರಂದು ಬೆಳಿಗ್ಗೆ, ಮನೆಯಲ್ಲಿ ತಂದಿಟ್ಟಿದ್ದ ಅಡಿಕೆ ಗಿಡಗಳಿಗೆ ಸಿಂಪಡಿಸುವ ಕ್ರಿಮಿನಾಶಕ ಔಷಧಿಯನ್ನು ಸೇವಿಸಿ ಅಸ್ವಸ್ಥಳಾಗಿದ್ದಳು. ಚಿಕಿತ್ಸೆಗಾಗಿ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು, ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾಳೆ ಅಂತಾ ಮುಂಡಗೋಡ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ