ಮುಂಡಗೋಡ ಶಿವಾಜಿ ಸರ್ಕಲ್ ನಲ್ಲಿ ಕಾರಿಗೆ ಗುದ್ದಿದ ಲಾರಿ..!

ಮುಂಡಗೋಡ: ಪಟ್ಟಣದ ಶಿವಾಜಿ ಸರ್ಕಲ್ ನಲ್ಲಿ ಲಾರಿಯೊಂದು ಕಾರಿಗೆ ಹಿಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮ ಕಾರಿನ ಹಿಂಬದಿ ಗೆ ಚಿಕ್ಕದಾಗಿ ಹಾನಿಯಾದ ಘಟನೆ ನಡೆದಿದೆ. ಹುಬ್ಬಳ್ಳಿ ಕಡೆಯಿಂದ ಶಿರಸಿ ಕಡೆಗೆ ಹೊರಟಿದ್ದ ಲಾರಿ, ಪಟ್ಟಣದಲ್ಲಿ ಬಂಕಾಪುರ ರಸ್ತೆ ಕಡೆಗೆ ಹೊರಟಿದ್ದ ಕಾರಿಗೆ ಹಿಂಬದಿಯಿಂದ ಡಿಕ್ಕಿಯಾಗಿತ್ತು ಎನ್ನಲಾಗಿದೆ‌. ಹೀಗಾಗಿ ಡಿಕ್ಕಿ ಹೊಡೆದು ಶಿರಸಿ ರಸ್ತೆ ಕಡೆಗೆ ಹೊರಟಿದ್ದ ಲಾರಿಯನ್ನು ತಡೆದ ಕಾರು ಚಾಲಕ, ಆಗಿರೋ ಹಾನಿ ತುಂಬಿ ಕೊಡುವಂತೆ ಒತ್ತಾಯಿಸಿದ್ದಾನೆ‌
ಮುಂಡಗೋಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

error: Content is protected !!