ಬೆಂಗಳೂರು : ಕರ್ನಾಟಕದ ಮಾಜಿ ಸಿಎಂ ಯಡಿಯೂರಪ್ಪ ಅವರ ಮೊಮ್ಮಗಳು ಆತ್ಮಹತ್ಯೆಗೆ ಶರಣಾಗಿದ್ದಾರೆ ಅಂತಾ ತಿಳಿದು ಬಂದಿದೆ.

ಬಿಎಸ್ ಯಡಿಯೂರಪ್ಪ ಅವರ ಎರಡನೇ ಪುತ್ರಿ ಪದ್ಮಾವತಿಯವರ ಮಗಳು ಸೌಂದರ್ಯ(30) ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.

ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ವೈದ್ಯೆಯಾಗಿದ್ದ ಸೌಂದರ್ಯ ಅವರ ಮೃತದೇಹವನ್ನು ಬೌರಿಂಗ್ ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ಮಾಹಿತಿ ತಿಳಿದು ಬಂದಿದೆ.

ಹೈಗ್ರೌಂಡ್ಸ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

error: Content is protected !!