ಮುಂಡಗೋಡ: ತಾಲೂಕಿನ ಇಂದೂರಿನಲ್ಲಿ ಆಕಸ್ಮಿಕವಾಗಿ ಭತ್ತದ ಬಣ್ಣವಿಗೆ ಬೆಂಕಿ ತಗುಲಿ ಸಾವಿರಾರು ರೂಪಾಯಿ ಮೌಲ್ಯದ ಭತ್ತ ಸುಟ್ಟು ಕರಕಲಾದ ಘಟನೆ ನಡೆದಿದೆ.

ಚಂದ್ರಶೇಖರ್ ಅರ್ಕಸಾಲಿ ಎಂಬುವ ರೈತರಿಗೆ ಸೇರಿದ ಒಂದೂವರೇ ಎಕರೆ ಪ್ರದೇಶದಲ್ಲಿ ಬೆಳೆಯಲಾಗಿದ್ದ ಭತ್ತದ ಬಣವಿಗೆ ರಾತ್ರಿ ಆಕಸ್ಮಿಕವಾಗಿ ಬೆಂಕಿ ತಗಲಿದ್ದು ಧಗ ಧಗನೆ ಹೊತ್ತಿ ಉರಿದಿದೆ. ಆಗ ವಿಷಯ ತಿಳಿದ ಗ್ರಾಮಸ್ಥರು ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸಿದ್ದು, ಆಗಬಹುದಾದ ಮತ್ತಷ್ಟು ಹಾನಿಯನ್ನು ತಪ್ಪಿಸಿದ್ದಾರೆ.

ಈ ಘಟನೆಯಲ್ಲಿ ಸುಮಾರು 50 ಸಾವಿರ ರೂ. ಮೌಲ್ಯದ ಭತ್ತ ಸುಟ್ಟು ಕರಕಲಾಗಿದೆ ಅಂತಾ ಅಂದಾಜಿಸಲಾಗಿದೆ.

error: Content is protected !!