ಮುಂಡಗೋಡ: ತಾಲೂಕಿನ ಇಂದಿರಾನಗರ ಬಳಿ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ ಹೊಡೆದಿದೆ. ಪರಿಣಾಮ ಬೈಕ್ ಸವಾರರು ಗಂಭೀರ ಗಾಯಗೊಂಡಿದ್ದಾರೆ‌.

ಮುಂಡಗೋಡ ಗಾಂಧಿ ನಗರದ ದುರ್ಗಪ್ಪ ಕೊರವರ್(25) ಎಂದು ಗುರುತಿಸಲಾಗಿದೆ‌. ಮತ್ತೋರ್ವ ಓಣಿಕೇರಿ ಗ್ರಾಮದವನು ಅಂತಾ ಮಾಹಿತಿ ಲಭ್ಯವಾಗಿದೆ. ಅಪಘಾತ ನಡೆದ ಕೆಲವೇ ಹೊತ್ತಲ್ಲಿ ಸ್ಥಳೀಯರು ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಿದ್ದಾರೆ. ಸದ್ಯ ಹೆಚ್ಚಿನ ಚಿಕಿತ್ಸೆಗಾಗಿ ಹುಬ್ಬಳ್ಳಿಯ ಕಿಮ್ಸ್ ಗೆ ರವಾನಿಸಲಾಗಿದೆ. ಮುಂಡಗೋಡ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ. 

error: Content is protected !!