ಮುಂಡಗೋಡ; ತಾಲೂಕಿನ ನ್ಯಾಸರ್ಗಿ ಬಳಿ ಭೀಕರ ಅಪಘಾತವಾಗಿದೆ. ವೇಗವಾಗಿ ಬಂದ ಕಾರೊಂದು ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ನುಜ್ಜುಗುಜ್ಜಾಗಿದೆ. ಘಟನೆಯಲ್ಲಿ ಓರ್ವ ಗಂಭೀರ ಗಾಯಗೊಂಡಿದ್ದಾನೆ.

ನ್ಯಾಸರ್ಗಿಯ ಅನ್ವರ್ ಷಹಜಹಾನ್ ದೊಡ್ಮನಿ(26) ಗಂಭೀರ ಗಾಯಗೊಂಡ ವ್ಯಕ್ತಿಯಾಗಿದ್ದಾನೆ. ಈತ ನ್ಯಾಸರ್ಗಿಯಿಂದ ಮುಂಡಗೋಡಿಗೆ ಕಾರಲ್ಲಿ ಬರುತ್ತಿದ್ದ ವೇಳೆ ಮರಕ್ಕೆ ಡಿಕ್ಕಿ ಹೊಡೆದಿದ್ದು, ಡಿಕ್ಕಿಯ ರಭಸಕ್ಕೆ ಕಾರು ಸಂಪೂರ್ಣ ನುಜ್ಜುಗುಜ್ಜಾಗಿದೆ.

ಮುಂಡಗೋಡಿನ 108 ಅಂಬ್ಯಲೆನ್ಸ್ ಗೆ ಕರೆ ಮಾಡಿ ಗಾಯಾಳುವನ್ನು ಆಸ್ಪತ್ರೆಗೆ ರವಾನಿಸಲಾಗಿದೆ. ಗಾಯಾಳುವಿನ ಕಾಲಿಗೆ ಭಾರೀ ಪೆಟ್ಟು ಬಿದ್ದಿದ್ದು ತಾಲೂಕಾಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿ, ಹೆಚ್ಚಿನ ಚಿಕಿತ್ಸೆಗಾಗಿ ಹುಬ್ಬಳ್ಳಿಯ ಕಿಮ್ಸ್ ಗೆ ರವಾನಿಸಲಾಗಿದೆ. 108 ಅಂಬ್ಯುಲೆನ್ಸ್ ನ ಧನರಾಜ್ ಹಾಗೂ ಚಾಲಕ ಕೆಂಚೇಶ್ ಗಾಯಾಳುವಿಗೆ ಪ್ರಥಮ ಚಿಕಿತ್ಸೆ ನೀಡಿದ್ರು.

ಮುಂಡಗೋಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ‌.

error: Content is protected !!