ಮುಂಡಗೋಡಿನ ಅಮ್ಮಾಜಿ ಕೆರೆ ಮೇಲೆ ಬೈಕ್ ಅಪಘಾತ, ಸವಾರನಿಗೆ ಗಂಭೀರ ಗಾಯ..!

ಮುಂಡಗೋಡ: ಪಟ್ಟಣದ ಹೊರವಲಯದ ಅಮ್ಮಾಜಿ ಕೆರೆ ಮೇಲೆ ಬೈಕ್ ಸ್ಕಿಡ್ ಆಗಿ ಬಿದ್ದು ಬೈಕ್ ಸವಾರ ಗಂಭೀರ ಗಾಯಗೊಂಡ ಘಟನೆ ನಡೆದಿದೆ.

ವಿರೂಪಾಕ್ಷಯ್ಯ ಜಂಬಯ್ಯನವರ್ (45) ಗಂಭೀರ ಗಾಯಗೊಂಡ ವ್ಯಕ್ತಿಯಾಗಿದ್ದಾನೆ. ಈತ ಹಾವೇರಿ ಜಿಲ್ಲೆಯ ಶಿಗ್ಗಾವಿ ತಾಲೂಕಿನ ಅಂದಲಗಿ ಗ್ರಾಮದವನು ಅಂತಾ ಮಾಹಿತಿ ಲಭ್ಯವಾಗಿದೆ. ಘಟನೆ ನಡೆದ ತಕ್ಷಣವೇ 108 ಅಂಬ್ಯುಲೆನ್ಸ್ ಮೂಲಕ ತಾಲೂಕಾಸ್ಪತ್ರೆಗೆ ರವಾನಿಸಲಾಗಿದೆ. ತುರ್ತು ವೈದ್ಯಕೀಯ ತಂತ್ರಜ್ಞ ಧನರಾಜ್ ಪ್ರಥಮ ಚಿಕಿತ್ಸೆ ನೀಡಿ ಆಸ್ಪತ್ರೆಗೆ ದಾಖಲಿಸಿದ್ದಾರೆ‌.

ಮುಂಡಗೋಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

error: Content is protected !!