ಮುಂಡಗೋಡ: ಬಾಚಣಕಿ ಜಲಾಶಯದಲ್ಲಿ ಪ್ರೇಮಿಗಳಿಬ್ಬರು ಆತ್ಮಹತ್ಯೆ ಮಾಡಿಕೊಂಡ್ರಾ..? ಸಧ್ಯದ ಮಾಹಿತಿ ಪ್ರಕಾರ ಹೌದು ಅಂತಿವೆ ಮೂಲಗಳು. ಕಾಲೇಜು ಯೂನಿಫಾರ್ಮಿನಲ್ಲೇ ಯುವಕ ಹಾಗೂ ಯುವತಿ ಬಾಚಣಕಿ ಜಲಾಶಯದಲ್ಲಿ ದಾರುಣ ಸಾವು ಕಂಡಿರೋ ಘಟನೆ ನಡೆದಿದೆ. ಕಾಲೇಜಿನಿಂದ ನೇರವಾಗಿ ಬಾಚಣಕಿ ಜಲಾಶಯಕ್ಕೆ ಬಂದಿರೋ ಯುವಕ ಯುವತಿ ಜಲಾಶಯದಲ್ಲಿ ನೀರು ಪಾಲಾಗಿದ್ದಾರೆ ಎನ್ನಲಾಗ್ತಿದೆ.
ಯುವತಿ ಶವ ಹೊರ ತೆಗೆಯಲಾಗಿದ್ದು, ಮೃತ ಯುವತಿ ಮುಂಡಗೋಡ ತಾಲೂಕಿನ ಕಲಕೇರಿ ಗ್ರಾಮದ ತನುಜಾ ಅಂತಾ ತಿಳಿದು ಬಂದಿದೆ. ಆದ್ರೆ ಯುವಕನ ಶವಕ್ಕಾಗಿ ಶೋಧ ಕಾರ್ಯ ನಡೆದಿದೆ. ಯುವಕನ ಶವಕ್ಕಾಗಿ ಪೊಲೀಸರ ಶೋಧ ಕಾರ್ಯ ನಡೆದಿದೆ. ಅಂದಹಾಗೆ ಹುಡುಗ ಮುಂಡಗೋಡ ತಾಲೂಕಿನ ಹನುಮಾಪುರದವನು ಅಂತಾ ಹೇಳಲಾಗಿದೆ.