ಹುಲಿಹೊಂಡದಲ್ಲಿ ಆಕಸ್ಮಿಕ ಬೆಂಕಿಗೆ ಕಬ್ಬು ಭಸ್ಮ..!
Video Player
00:00
00:00
ಮುಂಡಗೋಡ: ತಾಲೂಕಿನ ಹುಲಿಹೊಂಡ ಗ್ರಾಮದಲ್ಲಿ ಕಬ್ಬಿನ ಗದ್ದೆಗೆ ಆಕಸ್ಮಿಕ ಬೆಂಕಿ ತಗುಲಿ ಅಪಾರ ಪ್ರಮಾಣದ ಕಬ್ಬು ಸುಟ್ಟು ಕರಕಲಾದ ಘಟನೆ ನಡೆದಿದೆ. ಆಕಸ್ಮಿವಾಗಿ ಬೆಂಕಿ ತಗುಲಿದ್ದು, ಬೆಂಕಿಯ ಕೆನ್ನಾಲಿಗೆ ಪಕ್ಕದ ಗದ್ದೆಗೂ ಹರಡುವ ಸಾಧ್ಯತೆ ಇದ್ದ ಕಾರಣಕ್ಕೆ ಗ್ರಾಮಸ್ಥರು ಬೆಂಕಿ ನಂದಿಸಲು ಹರಸಾಹಸ ಪಟ್ಟರು, ನಂತರ ಅಗ್ನಿಶಾಮಕ ಸಿಬ್ಬಂದಿಗಳು ಬಂದು ಬೆಂಕಿ ನಂದಿಸಿದ್ರು. ಘಟನೆಯಲ್ಲಿ ಲಕ್ಷಾಂತರ ಮೌಲ್ಯದ ಕಬ್ಬು ಸುಟ್ಟು ಕರಕಲಾಗಿದ್ದು ರೈತನ ಬದುಕು ಮೂರಾಬಟ್ಟೆಯಾಗಿದೆ ಹೀಗಾಗಿ ರೈತನಿಗೆ ಪರಿಹಾರ ನೀಡಲು ಸರ್ಕಾರಕ್ಕೆ ಮನವಿ ಮಾಡಲಾಗಿದೆ.