ವಿಜಯಪುರ: ಚಾಲಕನ ನಿಯಂತ್ರಣ ತಪ್ಪಿ ಎರಡು ಟ್ರಾಕ್ಟರ್‌‌ಗಳಿಗೆ ಲಾರಿ ಡಿಕ್ಕಿಯಾಗಿ ಭಾರೀ ಅಪಘಾತ ಸಂಭವಿಸಿದೆ. ಘಟನೆಯಲ್ಲಿ ಎರಡೂ ಟ್ರಾಕ್ಟರ್‌ಗಳು ಸಂಪೂರ್ಣ ಜಖಂ ಆಗಿವೆ.

ವಿಜಯಪುರ ಜಿಲ್ಲೆ ದೇವರಹಿಪ್ಪರಗಿ ಪಟ್ಟಣದ ಹುಂಡೇಕಾರ್ ಭಟ್ಟಿ ಬಳಿಯ ರಾಜ್ಯ ಹೆದ್ದಾರಿ 50ರಲ್ಲಿ ಘಟನೆ ನಡೆದಿದೆ. ಲಾರಿ ಹಾಗೂ ಟ್ರಾಕ್ಟರ್ ಡ್ರೈವರ್‌ಗಳಿಗೆ ಗಂಭೀರ ಗಾಯವಾಗಿದೆ. ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಲಾಗಿದೆ‌. ದೇವರಹಿಪ್ಪರಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

error: Content is protected !!