ಮೃತ ಬೈಕ್ ಸವಾರ

ಮುಂಡಗೋಡ: ತಾಲೂಕಿನ ಮಳಗಿ ಬಳಿ ವಿದ್ಯುತ್ ಕಂಬಕ್ಕೆ ಬೈಕ್ ನಿಯಂತ್ರಣ ತಪ್ಪಿ ಡಿಕ್ಕಿಯಾದ ಪರಿಣಾಮ‌ ಬೈಕ್ ಸವಾರ ಗಂಭೀರ ಗಾಯಗೊಂಡು ಶಿರಸಿ ಆಸ್ಪತ್ರೆಗೆ ಸಾಗಿಸುವ ವೇಳೆ ಮೃತಪಟ್ಟ ಘಟನೆ ನಡೆದಿದೆ.

ಈ ಸುದ್ದಿಯ ವಿಡಿಯೊ ನೋಡಲು ಇಲ್ಲಿ ಕ್ಲಿಕ್ ಮಾಡಿ..https://youtu.be/TklQgUwYU58

ನಂದಿಕಟ್ಟಾ ಗ್ರಾಮದ ಅಮ್ಜದ್ ಖಾನ್ ಕಲಘಟಗಿ ಎಂಬುವವನೇ ಮೃತಪಟ್ಟ ದುರ್ದೈವಿಯಾಗಿದ್ದಾನೆ. ಈತ ಬೆಳಿಗ್ಗೆ ನಂದಿಕಟ್ಟಾ ಗ್ರಾಮದಿಂದ ಶಿರಸಿ ಕಡೆಗೆ ತೆರಳುತ್ತಿದ್ದಾಗ ಬೈಕ್ ನಿಯಂತ್ರಣ ತಪ್ಪಿ ರಸ್ತೆ ಪಕ್ಕದಲ್ಲಿದ್ದ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದ್ದಾನೆ ಎನ್ನಲಾಗಿದೆ‌.
ತೀವ್ರವಾಗಿ ಗಾಯಗೊಂಡಿದ್ದ ವ್ಯಕ್ತಿಯನ್ನು ಶಿರಸಿ ಆಸ್ಪತ್ರೆಗೆ ರವಾನಿಸುವ ವೇಳೆ ಮಾರ್ಗಮದ್ಯೆಯೇ ಮೃತಪಟ್ಟಿದ್ದಾನೆ ಅನ್ನೋ ಮಾಹಿತಿ ಲಭ್ಯವಾಗಿದ್ದು, ಮುಂಡಗೋಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

error: Content is protected !!