ಮುಂಡಗೋಡ: ಪಟ್ಟಣದಲ್ಲಿ ಇಂದು ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಕಾರ್ಮಿಕ ಸಂಘಟನೆ ಕಾರ್ಯಕರ್ತರು ಪ್ರತಿಭಟನೆ ಕೈಗೊಂಡಿದ್ರು.

ಪ್ರತಿಭಟನೆಯ ವಿಡಿಯೊ ಸುದ್ದಿ ನೋಡಲು ಇಲ್ಲಿ ಕ್ಲಿಕ್ ಮಾಡಿ.https://youtu.be/_9sHGn2Dwnk

ಇಲ್ಲಿನ ಪ್ರವಾಸಿ ಮಂದಿರದಿಂದ ಪ್ರಾರಂಭವಾಗಿದ್ದ ಪ್ರತಿಭಟನಾ ಮೆರವಣಿಗೆ, ಪಟ್ಟಣದ ಶಿವಾಜಿ ಸರ್ಕಲ್ ನಲ್ಲಿ ಬಂದು, ಮಾನವ ಸರಪಳಿ ನಿರ್ಮಿಸಿ ರಸ್ತೆ ತಡೆ ನಡೆಸಿದ್ರು. ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತ ಪಡಿಸಿದ್ರು‌. ನಂತರ ತಹಶೀಲ್ದಾರ್ ಕಾರ್ಯಾಲಯಕ್ಕೆ ತೆರಳಿ ಮನವಿ ಅರ್ಪಿಸಿದ್ರು‌. ಇನ್ನು ಪ್ರತಿಭಟನಾ ನಿರತರು ಶಿವಾಜಿ ಸರ್ಕಲ್ ನಲ್ಲಿ ಮಾನವ ಸರಪಳಿ ನಿರ್ಮಿಸಿ ರಸ್ತೆ ತಡೆ ನಡೆಸಿದ್ದ ಕಾರಣಕ್ಕೆ ಕೆಲಹೊತ್ತು ರಸ್ತೆ ಸಂಚಾರಕ್ಕೆ ಅಡಚಣೆ ಉಂಟಾಗಿತ್ತು. ವಾಹನಗಳು ಸಂಚರಿಸಲಾಗದೇ ಪರದಾಡುವ ಸ್ಥಿತಿ ನಿರ್ಮಾಣವಾಗಿತ್ತು.

error: Content is protected !!