ಮುಂಡಗೋಡ: ತಾಲೂಕಿನಲ್ಲಿ ಭಾರೀ ಮಳೆಯಾಗಿದೆ. ಮುಂಡಗೋಡ ಪಟ್ಟಣ ಸೇರಿದಂತೆ ಹಲವು ಕಡೆ ಗಾಳಿ, ಗುಡುಗು, ಮಿಂಚು ಆಲಿಕಲ್ಲು ಸಹಿತ ಭರ್ಜರಿ ಮಳೆಯಾಗಿದೆ. ಸುಮಾರು ಒಂದು ತಾಸಿಗೂ ಹೆಚ್ಚು ಸುರಿದ ಮಳೆಯ ಕಾರಣಕ್ಕೆ ಬಿಸಿಲ ಬೇಗೆಯಿಂದ ಬಸವಳಿದಿದ್ದ ತಾಲೂಕಿನ ಮಂದಿಗೆ ಮಳೆರಾಯ ಮತ್ತೆ ತಂಪೆರೆದಿದ್ದಾನೆ.
ಮಳೆಯ ದೃಷ್ಯ ಕ್ಯಾಮೆರಾ ಕಣ್ಣಲ್ಲಿ..
Video Player
00:00
00:00
Video Player
00:00
00:00
ಅಲಿಕಲ್ಲು ಮಳೆ..!
ಅಂದಹಾಗೆ, ಭರ್ಜರಿ ಮಳೆಗೂ ಮೊದಲು ಭಾರೀ ಗಾಳಿ ಬೀಸಿದೆ. ನಂತರ ಧಾರಾಕಾರ ಆಲಿಕಲ್ಲು ಬಿದ್ದಿವೆ. ಪರಿಣಾಮ ತಾಲೂಕಿನ ಮಾವು ಬೆಳೆಗಾರರಿಗೆ ತೀವ್ರ ಸಂಕಷ್ಟ ಎದುರಾದಂತೆ ಆಗಿದೆ. ಇನ್ನು ಭಾರೀ ಗಾಳಿ, ಮಳೆಯ ಕಾರಣಕ್ಕೆ ತಾಲೂಕಿನಾಧ್ಯಂತ ವಿದ್ಯುತ್ ಸಂಪರ್ಕ ಕಡಿತಗೊಳಿಸಲಾಗಿದೆ.
Video Player
00:00
00:00
ಎಲ್ಲೆಲ್ಲಿ ಮಳೆ ಅರ್ಭಟ..?
ಮುಂಡಗೋಡ ಪಟ್ಟಣ, ಬಾಚಣಕಿ, ಅರಶಿಣಗೇರಿ, ಕೊಪ್ಪ ಇಂದೂರು, ನಂದಿಕಟ್ಟಾ, ಟಿಬೇಟಿಯನ್ ಕಾಲೋನಿ ಸೇರಿದಂತೆ ಹಲವೆಡೆ ಆಲಿಕಲ್ಲು ಸಮೇತ ಮಳೆಯಾಗಿದೆ.