ಮುಂಡಗೋಡ: ತಾಲೂಕಿನ ಯಲ್ಲಾಪುರ ರಸ್ತೆಯ ಬಡ್ಡಿಗೇರಿ ಕ್ರಾಸ್ ಬಳಿ ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ಟಾಟಾ ಎಸ್ ವಾಹನ ಸ್ಟೆರಿಂಗ್ ಕಟ್ ಆಗಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ ಓರ್ವ ಸ್ಥಳದಲ್ಲೇ ಮೃತಪಟ್ಟು ಸುಮಾರು 15 ಕ್ಕೂ ಹೆಚ್ಚು ಜನರಿಗೆ ಗಾಯವಾದ ದಾರುಣ ಘಟನೆ ನಡೆದಿದೆ.
ಮಾಂಬು ಗಾವಡೆ (24) ಸ್ಥಳದಲ್ಲೇ ಮೃತಪಟ್ಟ ದುರ್ದೈವಿಯಾಗಿದ್ದಾನೆ. ಗಾಯಾಳುಗಳನ್ನು ಸದ್ಯ ಮುಂಡಗೋಡ ತಾಲೂಕಾಸ್ಪತ್ರೆಗೆ ರವಾನಿಸಲಾಗಿದೆ. ಅದ್ರಲ್ಲಿ 6 ಜನರ ಸ್ಥಿತಿ ಗಂಭೀರವಾಗಿದ್ದು, ಅವ್ರನ್ನು ಹುಬ್ಬಳ್ಳಿಯ ಕಿಮ್ಸ್ ಗೆ ರವಾನಿಸಲಾಗಿದೆ.
ಅಂದಹಾಗೆ, ಬಡ್ಡಿಗೇರಿಯಿಂದ ಕುಸೂರಿಗೆ ಕಾರ್ಮಿಕರನ್ನು ಕರೆತರುತ್ತಿದ್ದ ಟಾಟಾ ಎಸ್ ವಾಹನ ಚಲಿಸುತ್ತಿದ್ದಾಗಲೇ ಸ್ಟೇರಿಂಗ್ ಕಟ್ ಆಗಿತ್ತು ಎನ್ನಲಾಗಿದೆ. ಡಿಕ್ಕಿಯ ರಭಸಕ್ಕೆ ಟಾಟಾ ಎಸ್ ವಾಹನ ಪಲ್ಟಿಯಾಗಿ ಅವಘಡ ಸಂಭವಿಸಿದೆ. ಮುಂಡಗೋಡ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ. ಇನ್ನು ತಾಲೂಕಾಸ್ಪತ್ರೆಗೆ ಪಿಎಸ್ಐ ಬಸವರಾಜ್ ಮಬನೂರು ಭೇಟಿ ನೀಡಿ ಮುಂದಿನ ಕ್ರಮ ಕೈಗೊಂಡಿದ್ದಾರೆ.