ಮುಂಡಗೋಡ: ಪಟ್ಟಣದ ಅಮ್ಮಾಜಿ ಕೆರೆಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ಬಿದ್ದಿದ್ದ ಲಾರಿಯನ್ನು ಕ್ರೇನ್ ಮೂಲಕ ಹೊರತೆಗೆಯಲಾಗಿದೆ.

ಇಂದು ಬೆಳಿಗ್ಗೆ ಯಲ್ಲಾಪುರದಿಂದ ಮುಂಡಗೋಡ ಕಡೆಗೆ ಬರುತ್ತಿದ್ದ ಲಾರಿ ಚಾಲಕನ ನಿಯಂತ್ರಣ ತಪ್ಪಿ ಅಮ್ಮಾಜಿ ಕೆರೆಯಲ್ಲಿ ಧುಮುಕಿತ್ತು. ಹೀಗಾಗಿ, ಲಾರಿಯಲ್ಲಿದ್ದವರನ್ನು ಸಾರ್ವಜನಿಕರು ರಕ್ಷಣೆ‌ ಮಾಡಿದ್ದರು. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯವಾಗಿರಲಿಲ್ಲ. ಸದ್ಯ ಕೆರೆಯಲ್ಲಿ ಪಲ್ಟಿಯಾಗಿ ಅರ್ದಮರ್ದ ಮುಳುಗಿದ್ದ ಲಾರಿಯನ್ನು ಕ್ರೇನ್ ಮೂಲಕ ಹೊರತೆಗೆಯಲಾಗಿದೆ. ಈ ವೇಳೆ ಯಲ್ಲಾಪುರ ಮುಂಡಗೋಡ ರಸ್ತೆಯಲ್ಲಿ ಕೆಲಹೊತ್ತು ರಸ್ತೆ ಸಂಚಾರ ಸ್ಥಗಿತವಾಗಿತ್ತು.

error: Content is protected !!