ಮುಂಡಗೋಡ: ತಾಲೂಕಿನ ಹುಬ್ಬಳ್ಳಿ ರಸ್ತೆಯ ವಡಗಟ್ಟಾ ಸಮೀಪ ಬೀರವಳ್ಳಿ ಕ್ರಾಸ್ ಬಳಿ ಭೀಕರ ಅಪಘಾತವಾಗಿದೆ. ಬೈಕ್ ಗಳ‌ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಇಬ್ಬರು ಮಹಿಳೆಯರೂ ಸೇರಿ ನಾಲ್ವರು ಗಂಭೀರ ಗಾಯಗೊಂಡಿದ್ದಾರೆ. ಅದರಲ್ಲಿ ಇಬ್ಬರ ಸ್ಥಿತಿ ಚಿಂತಾಜನಕವಾಗಿದೆ ಅನ್ನೋ ಮಾಹಿತಿ ಲಭ್ಯವಾಗಿದೆ.

ಮುಂಡಗೋಡ ತಾಲೂಕಿನ ಅರಶಿಣಗೇರಿ ಗ್ರಾಮದ ಉಮೇಶ್ ಶೇಖಪ್ಪಾ ಲಮಾಣಿ ಗಂಭೀರ ಗಾಯಗೊಂಡಿದ್ದಾನೆ. ಇನ್ನುಳಿದಂತೆ ಶಿಗ್ಗಾವಿ ತಾಲೂಕಿನ ಕಮಲಾನಗರ ತಾಂಡಾದ ಇಬ್ಬರು ಮಹಿಳೆಯರು ಸೇರಿ ಮೂವರು ಗಾಯಗೊಂಡಿದ್ದಾರೆ. ಕಲಘಟಗಿ ತಾಲೂಕಿನ ಬೀರವಳ್ಳಿ ಗ್ರಾಮದಿಂದ ಕಮಲಾನಗರಕ್ಕೆ ಬೈಕ್ ಮೇಲೆ ಹೋಗುತ್ತಿದ್ದ ಮೂವರು, ತಡಸ ಕಡೆಯಿಂದ ಮುಂಡಗೋಡ ತಾಲೂಕಿನ ಅರಶಿಣಗೇರಿ ಗ್ರಾಮಕ್ಕೆ ಬರುತ್ತಿದ್ದ ಉಮೇಶ್ನ ಬೈಕ್ ಪರಸ್ಪರ ಡಿಕ್ಕಿಯಾಗಿದೆ. ಡಿಕ್ಕಿಯ ರಭಸಕ್ಕೆ ಎರಡು ಬೈಕ್ ಗಳು ನುಜ್ಜು ಗುಜ್ಜಾಗಿದೆ.

ಅಪಘಾತದಿಂದ ಗಂಭೀರ ಗಾಯಗೊಂಡು ನರಳುತ್ತಿದ್ದ ವೇಳೆ ಅದೇ ಮಾರ್ಗದಿಂದ ತೆರಳುತ್ತಿದ್ದ ರಾಜು ಹಾಗೂ ಅವರ ಸ್ನೇಹಿತರು ಉಪಚರಿಸಿದ್ದಾರೆ. ಅಲ್ದೆ ಅಂಬ್ಯುಲೆನ್ಸ್ ಹಾಗೂ ಪೊಲೀಸರಿಗೆ ಕರೆ‌ಮಾಡಿ ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸುವ ಕಾರ್ಯ ಮಾಡಿದ್ದಾರೆ. ಇನ್ನು ತೀವ್ರ ಗಾಯದಿಂದ ನರಳುತ್ತಿದ್ದ ಅರಶಿಣಗೇರಿ ಗ್ರಾಮದ ಉಮೇಶ್ ಎಂಬುವರ ಜೇಬಿನಲ್ಲಿದ್ದ 15, 231 ರೂ. ಅವ್ರ ಕುಟುಂಬಸ್ಥರಿಗೆ ಹಸ್ತಾಂತರಿಸಲಾಗಿದೆ.

ಸದ್ಯ ಅಂಬ್ಯಲೆನ್ಸ್ ಮೂಲಕ ಗಾಯಾಳುಗಳನ್ನು ಹುಬ್ಬಳ್ಳಿಯ ಕಿಮ್ಸ್ ಗೆ ರವಾನಿಸಲಾಗಿದೆ. ತಡಸ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ, ಮುಂದಿನ ಕ್ರಮ ಕೈಗೊಂಡಿದ್ದಾರೆ.

error: Content is protected !!