ವಡಗಟ್ಟಾ ಬಳಿ ಬೈಕ್ ಅಪಘಾತ: ಗಾಯಗೊಂಡಿದ್ದ ಅರಶಿಣಗೇರಿಯ ಉಮೇಶ್ ಲಮಾಣಿ ಸಾವು..!

ಮುಂಡಗೋಡ: ತಾಲೂಕಿನ ವಡಗಟ್ಟಾ ಸಮೀಪದ ಬೀರವಳ್ಳಿ ಕ್ರಾಸ್ ಬಳಿ, ಏ.29 ರಂದು ನಡೆದಿದ್ದ ಬೈಕ್ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಅರಶಿಣಗೇರಿ ವ್ಯಕ್ತಿ ಚಿಕಿತ್ಸೆ ಫಲಕಾರಿಯಾಗದೇ ಹುಬ್ಬಳ್ಳಿಯ ಕಿಮ್ಸ್ ನಲ್ಲಿ ಮೃತಪಟ್ಟಿದ್ದಾನೆ.

ಮುಂಡಗೋಡ ತಾಲೂಕಿನ ಅರಶಿಣಗೇರಿಯ ಉಮೇಶ್ ಶೇಖಪ್ಪಾ ಲಮಾಣಿ(55) ಮೃತಪಟ್ಟ ದುರ್ದೈವಿಯಾಗಿದ್ದಾನೆ. ಕಳೆದ ಏ.29 ರಂದು ಬೀರವಳ್ಳಿ ಕ್ರಾಸ್ ಬಳಿ ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಇಬ್ಬರು ಮಹಿಳೆಯರೂ ಸೇರಿ ನಾಲ್ವರು ಗಂಭೀರ ಗಾಯಗೊಂಡಿದ್ದರು. ಗಾಯಾಳುಗಳನ್ನು ಚಿಕಿತ್ಸೆಗಾಗಿ ಹುಬ್ಬಳ್ಳಿಯ ಕಿಮ್ಸ್ ಗೆ ದಾಖಲಿಸಲಾಗಿತ್ತು.

error: Content is protected !!