ಮುಂಡಗೋಡ ಪಟ್ಟಣದ ತಹಶೀಲ್ದಾರ ಕಚೇರಿಯಲ್ಲಿ ತಾಲೂಕಿನ 16 ಗ್ರಾಮ ಪಂಚಾಯತಿಗಳಲ್ಲಿ ಇದುವರೆಗೂ ಅನುಮೋದನೆಯಾಗದೇ ಕರ್ತವ್ಯ ನಿರ್ವಹಿಸುತ್ತಿರುವ ಸಿಬ್ಬಂದಿಗಳು ತಹಶೀಲ್ದಾರರವರ ಮುಖಾಂತರ ಮತ್ತು ಕಾರ್ಯನಿರ್ವಾಹಕ ಅಧಿಕಾರಿಗಳು ತಾಲೂಕ ಪಂಚಾಯತ ರವರ ಮುಖಾಂತರ ಸರ್ಕಾರಕ್ಕೆ ಮನವಿ ಪತ್ರ ಸಲ್ಲಿಸಿದ್ರು.
ತಾಲೂಕಿನ 16 ಗ್ರಾಮ ಪಂಚಾಯತಿಗಳಲ್ಲಿ ಕರ್ತವ್ಯ ನಿರ್ವಹಿಸ್ತಿರೊ ಹಲವು ಸಿಬ್ಬಂದಿಗಳಿಗೆ ಇನ್ನೂ ಅನುಮೋದನೆ ನೀಡಿಲ್ಲ. ಹೀಗಾಗಿ, ಈ ಸಿಬ್ಬಂದಿಗಳು ಬದುಕು ನಡೆಸುವುದು ಕಷ್ಟಕರವಾಗಿದೆ. ಹೀಗಾಗಿ, ತಕ್ಷಣವೇ ಅನುಮೋದನೆ ನೀಡಿ ಸಹಕಾರಿಯಾಗಬೇಕೆಂದು ಸರ್ಕಾರಕ್ಕೆ ಸಿಬ್ಬಂದಿಗಳು ಮನವಿ ಮಾಡಿದ್ದಾರೆ..