ಹುಬ್ಬಳ್ಳಿ; ಹುಬ್ಬಳ್ಳಿ – ಧಾರವಾಡ ಬೈಪಾಸ್ ರಸ್ತೆ ಸಾವಿನ ಹೆದ್ದಾರಿ ಎಂದು ಬಿಂಬಿತಗೊಂಡಿದೆ. ರಾಷ್ಟ್ರೀಯ ಹೆದ್ದಾರಿಯೂ ಆಗಿರೋ ಇಲ್ಲಿ, ಆಗಾಗ ಅಪಘಾತಗಳು ಸಂಭವಿಸುತ್ತಲೇ ಇರುತ್ತೆ. ಈ ಹಿನ್ನೆಲೆಯಲ್ಲಿ ಇದನ್ನು ದಶ ಪಥ ರಸ್ತೆಯನ್ನಾಗಿಸೋಕೆ ಶಿಲನ್ಯಾಸ ನೆರವೇರಿಸಲಾಗಿತ್ತು. ಇದರ ಬೆನ್ನ ಹಿಂದೆಯೇ ಇದೇ ರಸ್ತೆಯಲ್ಲಿ ಮತ್ತೊಂದು ಭೀಕರ ರಸ್ತೆ ಅಪಘಾತ ಸಂಭವಿಸಿದೆ.
ಖಾಸಗಿ ಬಸ್ ಹಾಗೂ ಲಾರಿಗಳ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿ ಏಂಟು ಜನ ಸಾವನ್ನಪ್ಪಿದ ಘಟನೆ ಹುಬ್ಬಳ್ಳಿ ಹೊರವಲಯದಲ್ಲಿ ನಡೆದಿದೆ. ಖಾಸಗಿ ಬಸ್ ಮತ್ತು ಲಾರಿ ನಡುವೆ ಮುಖಾಮುಖಿ ಡಿಕ್ಕಿಯಾಗಿ ಈ ದುರ್ಘಟನೆ ಸಂಭವಿಸಿದೆ.