ಮುಂಡಗೋಡ ಕಿಲ್ಲೆ ಓಣಿಯಲ್ಲಿ ಪೊಲೀಸರ ಭರ್ಜರಿ ಕಾರ್ಯಾಚರಣೆ, ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ ಪಡಿತರ ಅಕ್ಕಿ ವಶ..!

ಮುಂಡಗೋಡ ಪಿಎಸ್ಐ ಬಸವರಾಜ್ ಮಬನೂರು ನೇತೃತ್ವದಲ್ಲಿ ಭರ್ಜರಿ ಕಾರ್ಯಾಚರಣೆ ನಡೆದಿದೆ‌. ಪಟ್ಟಣದ ಕಿಲ್ಲೆ ಓಣಿಯಲ್ಲಿ ಅಕ್ರಮವಾಗಿ ಸಂಗ್ರಹಿಸಿ ಇಟ್ಟಿದ್ದ ಸುಮಾರು 45 ಕ್ವಿಂಟಾಲ್ ಪಡಿತರ ಅಕ್ಕಿ ವಶಪಡಿಸಿಕೊಳ್ಳಲಾಗಿದೆ‌.

ಮುಂಡಗೋಡ ಪಟ್ಟಣದ ಕಿಲ್ಲೆ ಓಣಿಯ ಸಿರಾಜ್ ಮುಲ್ಲಾ ಎಂಬುವವರ ಮನೆಯಲ್ಲಿ ಅಕ್ರಮವಾಗಿ ಪಡಿತರ ಅಕ್ಕಿ ಸಂಗ್ರಹಿಸಿ ಇಡಲಾಗಿತ್ತು. ಈ ಕುರಿತು ಖಚಿತ ಮಾಹಿತಿಯ ಆಧಾರದಲ್ಲಿ ದಾಳಿ ನಡೆಸಿದ ಪಿಎಸ್ಐ ಮತ್ತವರ ತ‌ಂಡ ಅಕ್ರಮ ಪಡಿತರ ಅಕ್ಕಿ ವಶಪಡಿಸಿಕೊಂಡಿದೆ.

ನಂತರದಲ್ಲಿ ಮುಂಡಗೋಡ ತಹಶೀಲ್ದಾರ್ ಹಾಗೂ ಆಹಾರ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ವಶಪಡಿಸಿಕೊಂಡ ಪಡಿತರ ಅಕ್ಕಿಯ‌ನ್ನು ತಹಶೀಲ್ದಾರ ಇಲಾಖೆಯ ವಶಕ್ಕೆ ಒಪ್ಪಿಸಲಾಗಿದೆ. ಈ ಕುರಿತು ಮುಂಡಗೋಡ ಠಾಣೆಯಲ್ಲಿ ಕೇಸು ದಾಖಲಾಗಿದೆ.

error: Content is protected !!