ಮುಂಡಗೋಡಿನ ಶಿಕ್ಷಕ ಆನಂದ್ ಕಡಗಿ ನಾಪತ್ತೆ, ಪ್ರಕರಣ ದಾಖಲು..!

ಮುಂಡಗೋಡ ರೋಟರಿ ಖಾಸಗಿ ಶಾಲೆಯ ಶಿಕ್ಷಕ ಆನಂದ್ ಕಡಗಿ ನಾಪತ್ತೆಯಾಗಿದ್ದಾರೆ ಅಂತಾ ಕುಟುಂಬಸ್ಥರು ಮುಂಡಗೋಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

ಸ್ಪರ್ಧಾತ್ಮಕ ಪರೀಕ್ಷೆ ಬರೆದಿದ್ದ ಆನಂದ್, ಪರೀಕ್ಷೆಯಲ್ಲಿ ಪಾಸ್ ಆಗಿರಲಿಲ್ಲ. ಹೀಗಾಗಿ, ಅದನ್ನೇ ಮನಸ್ಸಿಗೆ ಹಚ್ಚಿಕೊಂಡು, ಮೇ.29 ರಂದು ಮನೆಯಿಂದ ಹೋದವನು, ಮರಳಿ ಬಂದಿಲ್ಲ ಅಂತಾ ದೂರಿನಲ್ಲಿ ತಿಳಿಸಿದ್ದಾರೆ.

ಮೇ.29 ರ ರವಿವಾರ ಬೆಳಿಗ್ಗೆ ಸನವಳ್ಳಿ ರಸ್ತೆ ಕಡೆಗೆ ನಡೆದುಕೊಂಡೇ ಹೋಗಿದ್ದನ್ನ ಕೆಲವ್ರು ನೋಡಿದ್ದಾರೆ ಅನ್ನೋ ಮಾಹಿತಿ ಇದ್ದು ಮನೆ ಮಗನನ್ನು ಹುಡುಕಿ ಕೊಡಿ ಅಂತಾ ಪೊಲೀಸರಿಗೆ ದೂರು ನೀಡಿದ್ದಾರೆ‌. ‌ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು‌ ಮುಂದಿನ ಕ್ರಮ ಕೈಗೊಂಡಿದ್ದಾರೆ.

error: Content is protected !!