ಬೆಂಗಳೂರು: ಉತ್ತರ ಕನ್ನಡ ಜಿಲ್ಲೆ ಸೇರಿ, ಕರಾವಳಿ ಜಿಲ್ಲೆಯ ನಾಲ್ಕು ಪ್ರದೇಶಗಳಲ್ಲಿ ಮತ್ತೆ ನಿಷೇಧಿತ ಸ್ಯಾಟಲೈಟ್ ಫೋನ್ ಆಕ್ಟಿವ್ ಗೊಂಡಿರುವುದು ಬಾರೀ ಆತಂಕ ತಂದಿಟ್ಟಿದೆ..
ಬೇಹುಗಾರಿಕಾ ಏಜೆನ್ಸಿ ಸ್ಯಾಟಲೈಟ್ ಫೋನ್ ಲೊಕೇಷನ್ ಗಳನ್ನು ಪತ್ತೆ ಮಾಡಿದೆ., ಹೀಗಾಗಿ, ನಾಲ್ಕು ಅರಣ್ಯ ಪ್ರದೇಶಗಳಿಂದ ವ್ಯಕ್ತಿಗಳು ಸ್ಯಾಟಲೈಟ್ ಫೋನ್ ಮೂಲಕ ಸಂಪರ್ಕ ಸಾಧಿಸಿದ್ದಾರೆ ಅಂತಾ ಮಾಹಿತಿ ಲಭ್ಯವಾಗಿದೆ.
ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ-ಶಿರಸಿ ಮಧ್ಯೆ ಇರುವ ಅರಣ್ಯ, ಮಂಗಳೂರು ಹೊರ ಭಾಗದಲ್ಲಿರುವ ನಾಟಿಕಲ್, ಕುಳಾಯಿ, ಚಿಕ್ಕಮಗಳೂರು ಜಿಲ್ಲೆಯ ಕಡೂರು, ಬೀರೂರು ನಡುವಿನ ಅರಣ್ಯ ಸೇರಿದಂತೆ ಒಟ್ಟು ನಾಲ್ಕು ಸ್ಥಳಗಳಿಂದ ಸ್ಯಾಟಲೈಟ್ ಫೋನ್ ಮೂಲಕ ಸಂಪರ್ಕ ಸಾಧಿಸಿದ್ದಾರೆ.
ಮೇ 23ರಿಂದ 29ರವರೆಗೆ ನಾಲ್ಕು ಪ್ರದೇಶಗಳಲ್ಲಿ ಫೋನ್ ಆಕ್ಟಿವ್ ಆಗಿದ್ದು, 6 ದಿನಗಳ ಅವಧಿಯಲ್ಲಿ ನಾಲ್ಕು ಕಡೆಗಳಲ್ಲಿ ವ್ಯಕ್ತಿಗಳು ಸ್ಯಾಟಲೈಟ್ ಫೋನ್ ಸಂಪರ್ಕ ಸಾಧಿಸಿದ್ದಾರೆ ಎಂದು ಬೇಹುಗಾರಿಕಾ ಏಜೆನ್ಸಿ ಫೋನ್ ಲೊಕೇಷನ್ ಟ್ರೇಸ್ ಮಾಡಿದೆ.