ಮುಂದಿನ 4 ದಿನಗಳ ಕಾಲ ಬಾರೀ ಮಳೆ‌ ಮುನ್ಸೂಚನೆ..!

ಬೆಂಗಳೂರು: ಕರಾವಳಿ ಹಾಗೂ ಉತ್ತರ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಮುಂದಿನ 4 ದಿನಗಳ ಕಾಲ ಗುಡುಗು ಮಿಂಚು ಸಹಿತ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಹೆ ಎಚ್ಚರಿಕೆ ನೀಡಿದೆ.

ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಜೂನ್ 7ರಿಂದ 9ರವರೆಗೆ ಯಲ್ಲೋ ಅಲರ್ಟ್ ಘೋಷಿಸಲಾಗಿದೆ. ಜೂನ್ 9ರವವರೆಗೆ ಈ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ತಿಳಿಸಿದೆ.

ಬೆಂಗಳೂರು, ರಾಮನಗರ, ಚಿಕ್ಕಮಗಳೂರು ಹಾಗೂ ಚಿತ್ರದುರ್ಗದಲ್ಲಿ ಇಂದು ಯಲ್ಲೋ ಅಲರ್ಟ್ ಘೋಷಿಸಲಾಗಿದೆ.

error: Content is protected !!