ಬಸವರಾಜ್ ಹೊರಟ್ಟಿ ಪರ ಮತಯಾಚಿಸಿದ ಮುಂಡಗೋಡ ಬಿಜೆಪಿಗರು..!


ಮುಂಡಗೋಡ: ತಾಲೂಕಿನಲ್ಲೂ ವಿಧಾನ ಪರಿಷತ್ ಚುನಾವಣೆಯ ಕಾವು ಜೋರಾಗಿದೆ. ಪಶ್ಚಿಮ ಶಿಕ್ಷಕರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಸವರಾಜ್ ಹೊರಟ್ಟಿ ಪರ ಬಿಜೆಪಿ ಕಾರ್ಯಕರ್ತರು ವಿವಿಧ ಕಾಲೇಜುಗಳಿಗೆ ತೆರಳಿ ಮತಯಾಚನೆ ಮಾಡಿದ್ರು‌.

ಇಲ್ಲಿನ ಜೂನಿಯರ್ ಕಾಲೇಜು, ಪ್ರಥಮ ದರ್ಜೆ ಕಾಲೇಜು ಸೇರಿದಂತೆ ಹಲವು ಕಡೆ ತೆರಳಿದ ಬಿಜೆಪಿಯ ವಿವಿಧ ಪಧಾದಿಕಾರಿಗಳು ಹಾಗೂ ಕಾರ್ಯಕರ್ತರು ಬಿಜೆಪಿ ಅಭ್ಯರ್ಥಿಗೆ ಮತ ನೀಡುವಂತೆ ಮನವಿ ಮಾಡಿದ್ರು.

ಈ ವೇಳೆ ಬಿಜೆಪಿ ಮಂಡಲದ ಅಧ್ಯಕ್ಷ ನಾಗಭೂಷಣ ಹಾವಣಗಿ, ಬಿಜೆಪಿ ಪಕ್ಷದ ಜಿಲ್ಲಾ ಉಪಾಧ್ಯಕ್ಷ ಅಶೋಕ ಚಲವಾದಿ, ಎಸ್ ಟಿ ಮೋರ್ಚಾ ಜಿಲ್ಲಾಧ್ಯಕ್ಷ ಸಂತೋಷ ತಳವಾರ್, ಮಂಡಲ ಪ್ರಧಾನ ಕಾರ್ಯದರ್ಶಿಗಳಾದ ಮಂಜುನಾಥ್ ಪಾಟೀಲ್,ವಿಠ್ಠಲ್ ಬಾಳಂಬೀಡ , ಜಿಲ್ಲಾ ಯುವ ಮೋರ್ಚಾ ಸದಸ್ಯ ವೈ.ಪಿ. ಭುಜಂಗಿ, ಪಟ್ಟಣ ಪಂಚಾಯತ್ ಸದಸ್ಯ ಶ್ರೀಕಾಂತ್ ಸಾನು, , ಮುಖಂಡರಾದ ಉಮೇಶ್ ವಿಜಾಪುರ, ಸಂಜು ಪಿಸೆ,
ಪಟ್ಟಣ ಪಂಚಾಯಿತಿ ನಾಮ ನಿರ್ದೇಶಕರು ಹಾಗೂ ಪಕ್ಷದ ನಗರ ಮಹಾಶಕ್ತಿ ಕೇಂದ್ರದ ಪ್ರಧಾನ ಕಾರ್ಯದರ್ಶಿ ಗುರುರಾಜ ಕಾಮತ್, ಮುಂತಾದವರಿದ್ದರು.

error: Content is protected !!