ಕಾರವಾರ: ಅಕ್ರಮವಾಗಿ ಕೋಟ್ಯಾಂತರ ರೂಪಾಯಿ ಹವಾಲ ಹಣ ಸಾಗಟ ಮಾಡುತ್ತಿದ್ದ ಆರೋಪಿಯನ್ನು ಕಾರವಾರ ರೈಲ್ವೆ ಪೊಲೀಸರು ದಾಳಿ ಮಾಡಿ ಬಂಧಿಸಿದ್ದಾರೆ.
ಕಾರವಾರ ತಾಲೂಕಿನ ಶಿರವಾಡ ರೈಲ್ವೆ ನಿಲ್ದಾಣದಲ್ಲಿ ಮಂಗಳೂರು ಎಕ್ಸ್‌ಪ್ರೆಸ್ ರೈಲಿನಲ್ಲಿ ದಾಳಿ ನಡೆಸಿರೋ ಪೊಲೀಸರು, ಮುಂಬೈನಿಂದ ಮಂಗಳೂರಿಗೆ ಹವಾಲ ಹಣ ಸಾಗಾಟ ಮಾಡುತ್ತಿದ್ದ ರಾಜಸ್ಥಾನ ಮೂಲದ
ಮನೋಹರ್ ಸಿಂಗ್ ಅಲಿಯಾಸ ಚೇನ್ ಸಿಂಗ್ ಎಂಬ ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ. ಆತನಿಂದ ಎರಡು ಕೋಟಿ ಹಣ ವಶಕ್ಕೆ ಪಡೆದಿದ್ದಾರೆ.
ಕಾರವಾರ ಗ್ರಾಮೀಣ ಠಾಣೆಗೆ ಆರೋಪಿಯನ್ನು ರೈಲ್ವೇ ಪೊಲೀಸರು ಒಪ್ಪಿಸಿದ್ದಾರೆ.