ಮೈನಳ್ಳಿ ಬಳಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಬೈಕ್, ಕೆಂದಲಗೇರಿಯ ವ್ಯಕ್ತಿಗೆ ಗಂಭೀರ ಗಾಯ..!

ಮುಂಡಗೋಡ: ತಾಲೂಕಿನ ಮೈನಳ್ಳಿ ಸಮೀಪದಲ್ಲಿ ಬೈಕ್ ಅಪಘಾತವಾಗಿದೆ. ಬೈಕ್ ಸವಾರನೊಬ್ಬ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ ಗಂಭೀರ ಗಾಯಗೊಂಡು ಆಸ್ಪತ್ರೆ ಸೇರಿದ್ದಾನೆ.

ಕೆಂದಲೆಗೇರಿ ಗ್ರಾಮದ ನೂರ್ ಅಹ್ಮದ್ (30) ಎಂಬುವವನೇ ಗಂಭೀರ ಗಾಯಗೊಂಡ ವ್ಯಕ್ತಿಯಾಗಿದ್ದಾನೆ. ಈತ ಕೆಂದಲಗೇರಿ ಗ್ರಾಮದಿಂದ ಯಲ್ಲಾಪುರ ರಸ್ತೆ ಕಡೆಗೆ ಬೈಕ್ ನಲ್ಲಿ ತೆರಳುತ್ತಿದ್ದ, ಈ ವೇಳೆ ಬೈಕ್ ನಿಯಂತ್ರಣ ತಪ್ಪಿದೆ. ಪರಿಣಾಮ ರಸ್ತೆ ಬದಿಯಲ್ಲಿದ್ದ ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿಯಾಗಿದೆ. ಡಿಕ್ಕಿಯ ರಭಸಕ್ಕೆ ವಿದ್ಯುತ್ ಕಂಬವೂ ಮುರಿದಿದೆ.

ಸದ್ಯ ಬೈಕ್ ಸವಾರನ ಸ್ಥಿತಿ ಗಂಭೀರವಾಗಿದ್ದು, ತಾಲೂಕಾಸ್ಪತ್ರೆಯಲ್ಲಿ ಚಿಕಿತ್ಸೆಗೆ ರವಾನಿಸಲಾಗಿದೆ. ಮುಂಡಗೋಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

error: Content is protected !!