ಮುಂಡಗೋಡ: ತಾಲೂಕಿನ ಟಿಬೇಟಿಯನ್ ಕ್ಯಾಂಪ್ ನಂಬರ್ 1 ರ ಗಾಂದೇನ್ ಬೌದ್ಧ ಮಠದಲ್ಲಿ ಇಂದಿನಿಂದ ನಾಲ್ಕು ದಿನಗಳ ಕಾಲ ಎರಡನೇ ಇಂಡೋ-ಟಿಬೆಟಿಯನ್ ವಿದ್ವಾಂಸರ ಸಮ್ಮೇಳನವನ್ನು ಆಯೋಜಿಸಲಾಗಿದೆ. ಹೀಗಾಗಿ ಇಂದು ಸಮ್ಮೇಲನ ಕಾರ್ಯಕ್ರಮ ಉದ್ಘಾಟನೆಗೊಂಡಿದೆ.
ವಿಶ್ವಕ್ಕೆ ಬುದ್ಧನ ಅಹಿಂಸಾ ತತ್ವಗಳ ಸಂದೇಶ ಸಾರುವ ನಿಟ್ಟಿನಲ್ಲಿ ಹಾಗೂ ವಿಶ್ವ ಶಾಂತಿಗಾಗಿ ವಿಶೇಷ ಪೂಜಾ ಕಾರ್ಯಕ್ರಮ ಹಾಗೂ ಚರ್ಚೆಗಳು ನಡೆಯಲಿವೆ. ಕಾರ್ಯಕ್ರಮದಲ್ಲಿ ನೂರಾರು ಸ್ಥಳೀಯ ಟಿಬೇಟಿಯನ್ ಬೌದ್ಧ ಬಿಕ್ಕುಗಳು ಪಾಲ್ಗೊಂಡಿದ್ದಾರೆ.
ಉತ್ತರ ಪ್ರದೇಶ, ಬಿಹಾರ, ಪಶ್ಚಿಮ ಬಂಗಾಳ, ಕೇರ್ಲಾ, ಮಹಾರಾಷ್ಟ್ರ, ರಾಜಸ್ಥಾನ, ದೆಹಲಿ, ಜಾರ್ಖಂಡ್, ಚತ್ತೀಸ್‌ಗಢ, ಗುಜರಾತ್, ಹರಿಯಾಣ, ಲಡಾಖ್, ಹಿಮಾಚಲ ಮತ್ತು ಕರ್ನಾಟಕ ಸೇರಿ ಹಲವು ರಾಜ್ಯಗಳಿಂದ ವಿದ್ವಾಂಸರು ಆಗಮಿಸಲಿದ್ದಾರೆ.