ಮಳಗಿಯಲ್ಲಿ “ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆ” ಕಾರ್ಯಕ್ರಮ..!


ಮುಂಡಗೋಡ: ತಾಲೂಕಿನ ಮಳಗಿ ಗ್ರಾಮದಲ್ಲಿ ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆ’ ಕಾರ್ಯಕ್ರಮ ಉದ್ಘಾಟನೆಗೊಂಡಿದೆ. ಜಿಲ್ಲಾಧಿಕಾರಿ ಹಾಗೂ ಇತರೆ ಅಧಿಕಾರಿಗಳಿಂದ ಗಿಡ ನೆಡುವ ಕಾರ್ಯಕ್ರಮದ ಮೂಲಕ ಕಾರ್ಯಕ್ರಮ ಪ್ರಾರಂಭವಾಗಿದೆ.

ತಹಶೀಲ್ದಾರರಿಂದ ಕಂದಾಯ ಅದಾಲತ, ಪಿಂಚಣಿ ಅದಾಲತ ಹಾಗೂ ಹಲವು ಕಾರ್ಯಕ್ರಮಗಳ ಮೂಲಕ ಸಾರ್ವಜನಿಕರಿಗೆ ಮಾಹಿತಿ ನೀಡಲಾಗುತ್ತಿದೆ.
ನಂತರ ಸಾರ್ವಜನಿಕರ ಅಹವಾಲು ಸ್ವೀಕರಿಸುವ ಕಾರ್ಯಕ್ರಮ ಇದೆ.

ಮಳಗಿ ಭಾಗದ ನೂರಾರು ಸಾರ್ವಜನಿಕರು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದಾರೆ. ತಮ್ಮ ಅಹವಾಲುಗಳೊಂದಿಗೆ ವೃದ್ಧರು, ರೈತರು, ಯುವಕರು ಪಾಲ್ಗೊಂಡಿದ್ದಾರೆ.

error: Content is protected !!