ನ್ಯಾಸರ್ಗಿಯಲ್ಲಿ ಪಿಐ ಸಿದ್ದಪ್ಪ ಸಿಮಾನಿ ನೇತೃತ್ವದಲ್ಲಿ ಓಸಿ ಅಡ್ಡೆಯ ಮೇಲೆ ಪೊಲೀಸರ ದಾಳಿ, ಓರ್ವ ವಶಕ್ಕೆ..!

ಮುಂಡಗೋಡ: ತಾಲೂಕಿನ ನ್ಯಾಸರ್ಗಿಯಲ್ಲಿ ಮಟ್ಕಾ ಅಡ್ಡೆಯ ಮೇಲೆ ಪಿಐ ಸಿದ್ದಪ್ಪ ಸಿಮಾನಿ ನೇತೃತ್ವದ ತಂಡ ದಾಳಿ ಮಾಡಿದೆ. ಮಟ್ಕಾ ದಂಧೆ ನಡೆಸುತ್ತಿದ್ದ ಓರ್ವನನ್ನು ವಶಕ್ಕೆ ಪಡೆದು ಕೇಸು ದಾಖಲಿಸಿದ್ದಾರೆ ಪೊಲೀಸ್ರು.

ನ್ಯಾಸರ್ಗಿಯ ಪ್ರಕಾಶ ಉದಯ ಹರಿಜನ(32) ಎಂಬುವವನ ಮೇಲೆ ಕೇಸು ದಾಖಲಿಸಲಾಗಿದೆ. ಈತ ನ್ಯಾಸರ್ಗಿ ಗ್ರಾಮದ ಕಲಿಯಮ್ಮಾ ದೇವಸ್ಥಾನದ ಎದುರಿನ ಸಾರ್ವಜನಿಕ ಸ್ಥಳದಲ್ಲಿ ಓಸಿ ಬರೆಯುತ್ತಿದ್ದ, ಅದೇ ವೇಳೆ ದಾಳಿ ಮಾಡಿರೋ ಪಿಐ ಸಿದ್ದಪ್ಪ ಸಿಮಾನಿ ಮತ್ತವರ ತಂಡ, ಮಟ್ಕಾ ನಡೆಸುತ್ತಿದ್ದವರ ಛಳಿ ಬಿಡಿಸಿದೆ. ದಾಳಿ ವೇಳೆ ನಗದು 410 ರೂ. ಜಪ್ತಿ ಮಾಡಲಾಗಿದೆ.

ಮುಂಡಗೋಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

error: Content is protected !!