ವರೂರು ಬಳಿ ಸರಣಿ ಅಪಘಾತ, ಓರ್ವ ಸ್ಥಳದಲ್ಲೇ ಸಾವು, ಐವರಿಗೆ ಗಂಭೀರ ಗಾಯ..!


ಹುಬ್ಬಳ್ಳಿ ಸಮೀಪದ ವರೂರಿನ ವಿಆರ್ ಎಲ್ ಬಳಿ ರಾ.ಹೆದ್ದಾರಿ 4 ರಲ್ಲಿ, ಭೀಕರ ಸರಣಿ ಅಪಘಾತವಾಗಿದೆ‌. ಸ್ಥಳದಲ್ಲೇ ಓರ್ವ ಸಾವನ್ನಪ್ಪಿದ್ದು, ಐವರಿಗೆ ಗಂಭೀರ ಗಾಯವಾಗಿದೆ.

ವರೂರಿನ VRL ಬಳಿ, ರಸ್ತೆ ದಾಟುತ್ತಿದ್ದ ವ್ಯಕ್ತಿಗೆ ಕಾರು ಡಿಕ್ಕಿ ಹೊಡೆದಿದೆ. ಪರಿಣಾಮ ವ್ಯಕ್ತಿಯೊರ್ವ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಅಪಘಾತ ಕಂಡು ಮೃತ ವ್ಯಕ್ತಿಯನ್ನು ನೋಡಲು ಬಂದ ಐವರಿಗೆ ಮತ್ತೊಂದು ಕಾರು ಡಿಕ್ಕಿ ಹೊಡೆದು ಪರಾರಿಯಾಗಿದೆ.

ಹೀಗಾಗಿ ಐವರಿಗೆ ಗಂಭೀರ ಗಾಯವಾಗಿದೆ. ಇದ್ರಲ್ಲಿ ಗಾಯಾಳುವನ್ನು ಸಾಗಿಸಲು ಬಂದಿದ್ದ ಅಂಬ್ಯುಲೆನ್ಸ್ ಸಿಬ್ಬಂದಿಗೂ ಗಾಯವಾಗಿದೆ.

ಗಾಯಾಳುಗಳನ್ನು ಹುಬ್ಬಳ್ಳಿಗೆ ರವಾನಿಸಲಾಗಿದೆ. ಮೃತ ವ್ಯಕ್ತಿಯ ಗುರುತು ಇನ್ನೂ ಪತ್ತೆಯಾಗಿಲ್ಲ. ಹುಬ್ಬಳ್ಳಿ ಸಂಚಾರಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಮುಂದಿನ ಕ್ರಮ ಕೈಗೊಂಡಿದ್ದಾರೆ.

error: Content is protected !!