ಮುಂಡಗೋಡ: ತಾಲೂಕಿನ ಅಗಡಿಯಲ್ಲಿ ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದ ಅಂಗಡಿಯ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ. ಪಿಐ ಸಿದ್ದಪ್ಪ ಸಿಮಾನಿ ನೇತೃತ್ವದಲ್ಲಿ ನಡೆದ ದಾಳಿಯಲ್ಲಿ, ಓರ್ವನ ಮೇಲೆ ಕೇಸು ದಾಖಲಿಸಲಾಗಿದೆ.
ಅಗಡಿಯ ನಾಗರಾಜ್ ರೇಖಪ್ಪ ಲಮಾಣಿ ಎಂಬುವವನ ಮೇಲೆ ಕೇಸು ದಾಖಲಿಸಲಾಗಿದ್ದು, ರಸ್ತೆ ಪಕ್ಕದ ಗೂಡಂಗಡಿಯಲ್ಲಿ ಅಕ್ರಮವಾಗಿ ಯಾವುದೇ ಪರ್ಮಿಟ್ ಇಲ್ಲದೇ ಮದ್ಯ ಮಾರಾಟ ಮಾಡುತ್ತಿದ್ದ ಆರೋಪದಲ್ಲಿ ಮುಂಡಗೋಡ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.