ಇಂದೂರು ಬಳಿ ಸ್ಕೂಟಿಗೆ ಅಡ್ಡ ಬಂದ ಎಮ್ಮೆ; ಸ್ಕಿಡ್ ಆಗಿ ಬಿದ್ದು ಗಂಭೀರ ಗಾಯಗೊಂಡ ನಂದಿಕಟ್ಟಾ ಯುವಕ..!


ಮುಂಡಗೋಡ : ತಾಲೂಕಿನ ಇಂದೂರು ಬಳಿ ಅಪಘಾತವಾಗಿದೆ. ಎಮ್ಮೆ ಅಡ್ಡ ಬಂದ ಪರಿಣಾಮ ಸ್ಕೂಟಿ ಸ್ಕಿಡ್ ಆಗಿ ಬಿದ್ದು ಯುವಕ ಗಂಭೀರ ಗಾಯಗೊಂಡಿದ್ದಾನೆ.

ತಾಲೂಕಿನ ನಂದಿಕಟ್ಟಾ ಗ್ರಾಮದ ಯುವಕ ಗಂಭೀರ ಗಾಯಗೊಂಡಿದ್ದಾನೆ. ಯುವಕನ ಹೆಸರು ಇನ್ನು ತಿಳಿದು ಬಂದಿಲ್ಲ. ಗಂಭೀರ ಗಾಯಗೊಂಡು ರಸ್ತೆ ಬದಿಯಲ್ಲಿ ಬಿದ್ದಿದ್ದ ಯುವಕನನ್ನು ಸ್ಥಳೀಯರು ನೋಡಿದ್ದಾರೆ‌. ತಕ್ಷಣವೇ ಮುಂಡಗೋಡ ತಾಲೂಕಾಸ್ಪತ್ರೆಗೆ ರವಾನಿಸಿದ್ದಾರೆ. ಮುಂಡಗೋಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ‌.

error: Content is protected !!