ಹುಬ್ಬಳ್ಳಿಯಲ್ಲಿ ಸರಳವಾಸ್ತು ಖ್ಯಾತಿಯ ಚಂದ್ರಶೇಖರ ಗುರೂಜಿಯ ಬರ್ಬರ ಹತ್ಯೆ..! 60 ಬಾರಿ ಚಾಕುವಿನಿಂದ ಚುಚ್ಚಿ ಕೊಂದ ಹಂತಕರು..!

ಹುಬ್ಬಳ್ಳಿ: ಸರಳವಾಸ್ತು ಖ್ಯಾತಿಯ ಚಂದ್ರಶೇಖರ ಗುರೂಜಿಯ ಬೀಕರ ಹತ್ಯೆಯಾಗಿದೆ. ಹುಬ್ಬಳ್ಳಿಯ ಖಾಸಗಿ ಹೊಟೇಲಿನಲ್ಲಿ ಭಕ್ತರ ಸೋಗಿನಲ್ಲಿ ಬಂದ ವ್ಯಕ್ತಿಯಿಂದ ಕೊಲೆ ನಡೆದಿದೆ.

ಕಾಲಿಗೆ ಬೀಳುವ ನೆಪದಲ್ಲಿ ಬಂದ ವ್ಯಕ್ತಿ ಕಾಲಿಗೆ ಬೀಳುತ್ತಿದ್ದಂತೆ, ಮತ್ತೊಂದು ವ್ಯಕ್ತಿ ಚಾಕುವಿನಿಂದ ಇರಿದು ಕೊಲೆ ಮಾಡಿದ್ದಾನೆ. ಕೇವಲ 40 ಸೆಕೆಂಡ್ ನಲ್ಲೆ 60 ಬಾರಿ ಎದೆಗೆ ಚೂರಿ ಇರಿತವಾಗಿದೆ. ಹೀಗಾಗಿ, ಸ್ಥಳದಲ್ಲೇ ಚಂದ್ರಶೇಖರ ಸ್ವಾಮೀಜಿ ಮೃತಪಟ್ಟಿದ್ದಾರೆ.

ಕೊಲೆಗೆ ಕಾರಣವೇನು, ಕೊಲೆಗಾರರು ಯಾರು ಅನ್ನೋದು ಇನ್ನಷ್ಟೇ ತಿಳಿದು ಬರಬೇಕಿದೆ. ಸ್ಥಳಕ್ಕೆ ಪೊಲೀಸ್ ಕಮೀಷನರ್ ಲಾಬುರಾಮ್ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.

error: Content is protected !!