ಭಾರೀ ಮಳೆ, ಗೋಕರ್ಣ ಬಳಿ ರಸ್ತೆ ಮೇಲೆ ಗುಡ್ಡ ಕುಸಿತ, ರಸ್ತೆ ಸಂಚಾರ ಅಸ್ತವ್ಯಸ್ತ..!


ಉತ್ತರ ಕನ್ನಡ ಜಿಲ್ಲೆಯಲ್ಲಿ ನಿರಂತರ ಮಳೆ ಹಿನ್ನೆಲೆಯಲ್ಲಿ, ಅವಾಂತರಗಳು ಸೃಷ್ಟಿಯಾಗಿವೆ. ಕುಮಟಾ ತಾಲೂಕಿನ ಗೋಕರ್ಣ ಕ್ರಾಸ್ ಬಳಿ ಗುಡ್ಡ ಕುಸಿತವಾಗಿದೆ.

ಗೋಕರ್ಣದ ಮಾದನಗೇರಿಯ ಬಳಿ ಗುಡ್ಡ ಕುಸಿತವಾಗಿದ್ದು, ಐಆರ್‌ಬಿ ಅವೈಜ್ಞಾನಿಕ ರಸ್ತೆ ಕಾಮಗಾರಿಯಿಂದ ಗುಡ್ಡ ಕುಸಿತವಾಗಿದೆ ಅನ್ನೋ ಆರೋಪ ಕೇಳಿಬಂದಿದೆ. ಗುಡ್ಡ ಕುಸಿತದಿಂದಾಗಿ, ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಕೆಲಕಾಲ ಸಂಚಾರ ಅಸ್ತವ್ಯಸ್ತವಾಗಿತ್ತು, ಹೀಗಾಗಿ, ವಾಹನಗಳಿಗೆ ಏಕಮುಖ ಸಂಚಾರಕ್ಕೆ ಅವಕಾಶ ಕಲ್ಪಿಸಲಾಗಿತ್ತು.

ಹೆದ್ದಾರಿಗೆ ಬಿದ್ದ ಮಣ್ಣನ್ನ ತೆರವುಗೊಳಿಸುವ ಕಾರ್ಯ ಚುರುಕುಗೊಳಿಸಲಾಗಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ, ಸಂಚಾರಕ್ಕೆ ಅನುವು ಮಾಡಿಕೊಟ್ಟಿದ್ದಾರೆ.

error: Content is protected !!