ನಾಳೆ ಗುರುವಾರವೂ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ರಜೆ ವಿಸ್ತರಿಸಿ ಡೀಸಿ ಆದೇಶ..!

ಮುಂಡಗೋಡ ತಾಲೂಕಿನಲ್ಲಿ ಮಳೆಯ ಅರ್ಬಟ ಮುಂದುವರೆದ ಹಿನ್ನೆಲೆಯಲ್ಲಿ ನಾಳೆ ಗುರುವಾರವೂ ಶಾಲಾ ಕಾಲೇಜುಗಳಿಗೆ ರಜೆ ವಿಸ್ತರಣೆ ಮಾಡಲಾಗಿದೆ.

ಉತ್ತರ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯ ಸೂಚನೆ‌ ನೀಡಲಾಗಿದ್ದು. ಹವಾಮಾನ ಇಲಾಖೆ ನೀಡಿರೋ ಮುನ್ಸೂಚನೆ ಹಿನ್ನೆಲೆಯಲ್ಲಿ, ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದ್ದು, ನಾಳೆ ಗುರುವಾರವೂ ರಜೆ ಘೋಷಣೆ‌ ಮಾಡಲಾಗಿದೆ.

ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿಗಳು ಆದೇಶಿಸಿದ್ದಾರೆ. ಭಾರೀ‌ಮಳೆ ಸುರಿಯೋ ಮುನ್ಸೂಚನೆ ನೀಡಲಾಗಿದ್ದು, ಎಚ್ಚರಿಕೆ ವಹಿಸುವಂತೆ ತಾಲೂಕಾಡಳಿತಗಳಿಗೆ ಸಂದೇಶ ರವಾನಿಸಲಾಗಿದೆ.

error: Content is protected !!