ಹಳಿಯಾಳ: ತಾಲೂಕಿನಲ್ಲಿ ಮಳೆಯಿಂದ ಭಾರೀ ಅನಾಹುತವಾಗಿದೆ. ನಿರಂತರ ಮಳೆಯ ಪರಿಣಾಮ ಮಣ್ಣಿನ ಗೋಡೆ ಕುಸಿದು ತಾಯಿ ಮಗಳು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮುರ್ಕವಾಡ ಗ್ರಾಮದಲ್ಲಿ ಘಟನೆ ನಡೆದಿದೆ.
ರುಕ್ಮಿಣಿ ವಿಠ್ಠಲ್ ಮಾಚಕ (37), ಶ್ರೀದೇವಿ ವಿಠ್ಠಲ್ ಮಾಚಕ (13) ಸಾವನ್ನಪ್ಪಿದ ದುರ್ದೈವಿಗಳಾಗಿದ್ದಾರೆ. ಇಂದು ಬೆಳಗಿನ ಜಾವ ಮನೆ ಗೋಡೆ ಕುಸಿದು, ಮನೆ ಗೋಡೆ ಪಕ್ಕದಲ್ಲಿ ಮಲಗಿದ್ದ ತಾಯಿ ಮಗಳ ದುರಂತ ಸಾವು ಕಂಡಿದ್ದಾರೆ. ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.
ನಿರಂತರ ಮಳೆ ನೀರಿಗೆ ಗೋಡೆ ನೆನದು ಕುಸಿತವಾಗಿದರ. ಘಟನಾ ಸ್ಥಳಕ್ಕೆ ಹಳಿಯಾಳ ತಹಶಿಲ್ದಾರ ಪ್ರಕಾಶ ಗಾಯಕವಾಡ ಹಾಗೂ ತಾ.ಪಂ ಇಓ ಪರಶುರಾಮ್ ಗಸ್ತಿ ಹಾಗೂ ಅಧಿಕಾರಿಗಳ ತಂಡ ಬೇಟಿ ಪರಿಶೀಲನೆ ನಡೆಸಿದ್ದಾರೆ.