ಹುನಗುಂದ ಸೊಸೈಟಿ ಅಧ್ಯಕ್ಷರಾಗಿ ಶಂಕ್ರಪ್ಪ ಲಮಾಣಿ, ಉಪಾಧ್ಯಕ್ಷರಾಗಿ ಈರಪ್ಪ ಯಲಿವಾಳ ಅವಿರೋಧ ಆಯ್ಕೆ..!

ಮುಂಡಗೋಡ: ತಾಲೂಕಿನ ಹುನಗುಂದ ವೀರೇಶ್ವರ ಸೇವಾ ಸಹಕಾರಿ ಸಂಘದ ನೂತನ ಅಧ್ಯಕ್ಷರಾಗಿ ಶಂಕ್ರಪ್ಪ ಲಮಾಣಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಅದ್ರಂತೆ ಉಪಾಧ್ಯಕ್ಷರಾಗಿ ಈರಪ್ಪ ಯಲಿವಾಳ ಆಯ್ಕೆಯಾಗಿದ್ದಾರೆ.

ಇಂದು ಸಹಕಾರಿ ಸಂಘದ ಸಭಾಭವನದಲ್ಲಿ ನಡೆದ ಸಭೆಯಲ್ಲಿ ಅಧ್ಯಕ್ಷರು ಉಪಾಧ್ಯಕ್ಷರ ಅವಿರೋಧ ಆಯ್ಕೆ‌ ನಡೆಯಿತು. ಅಂದಹಾಗೆ, ಈ ಹಿಂದೆ ಅಧ್ಯಕ್ಷರಾಗಿದ್ದ ಅಬ್ದುಲ್ ರೆಹಮಾನ್ ಹಕೀಂ ಹಾಗೂ ಉಪಾಧ್ಯಕ್ಷರಾಗಿದ್ದ ಪರಶುರಾಮ್ ತಳವಾರ ರಾಜೀನಾಮೆಯಿಂದ ತೆರವಾಗಿದ್ದ ಸ್ಥಾನಗಳಿಗೆ ಆಯ್ಕೆ ನಡೆಯಿತು.

ಈ ವೇಳೆ ಕಾಂಗ್ರೆಸ್ ಮುಖಂಡ ಎಚ್.ಎಂ.ನಾಯ್ಕ್, ಮಾಜಿ ಅಧ್ಯಕ್ಷ ಸಿದ್ದಪ್ಪ ಹಡಪದ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.

error: Content is protected !!