ಮುಂಡಗೋಡ:ತಾಲೂಕಿನ ಕೊಪ್ಪ ಗ್ರಾಮದಲ್ಲಿ ವ್ಯಕ್ತಿಯೋರ್ವ ನೇಣಿಗೆ ಶರಣಾಗಿದ್ದಾನೆ. ಶ್ರೀನಿವಾಸ್ ನರಸಿಂಹ ಬಾರಬಾರ್ (45) ಎಂಬುವವನೇ ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿಯಾಗಿದ್ದಾನೆ.
ಮದ್ಯಾನ ಕೊಪ್ಪ ಗ್ರಾಮದ ತನ್ನ ಹಳೆಯ ಮನೆಯಲ್ಲಿ ಯಾರೂ ಇಲ್ಲದ ವೇಳೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಕೊಪ್ಪ ಗ್ರಾಮದಲ್ಲೇ ಹೇರ್ ಕಟ್ಟಿಂಗ್ ಸಲೂನ್ ನಡೆಸುತ್ತಿದ್ದ ಶ್ರೀನಿವಾಸ್, ಇಂದು ಮದ್ಯಾಹ್ನ ಏಕಾಏಕಿ ಆತ್ಮಹತ್ಯೆಗೆ ಶರಣಾಗಿದ್ದಾನೆ. ಆದ್ರೆ, ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ.
ಮುಂಡಗೋಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.