ಮಂಗಳೂರಿನಲ್ಲಿ ಬೆಳ್ಳಂ ಬೆಳಿಗ್ಗೆ ಫೈರಿಂಗ್, ನಟೋರಿಯಸ್ ರೌಡಿಶೀಟರ್ ಮೇಲೆ ದಾಳಿ..!


ಮಂಗಳೂರು: ನಗರದಲ್ಲಿ ಇಂದು ಬೆಳ್ಳಂಬೆಳಿಗ್ಗೆ ಗುಂಡಿನ ಸದ್ದು ಕೇಳಿದೆ. ನಗರದ ಅಸೈಗೋಳಿ ಬಳಿ ಪೊಲೀಸರು ನಟೋರಿಯಸ್ ರೌಡಿಶೀಟರ್ ಮುಕ್ತಾರ್ ಮೇಲೆ ಫೈರಿಂಗ್ ಮಾಡಿದ್ದಾರೆ.

15ಕ್ಕೂ ಅಧಿಕ ಪ್ರಕರಣಗಳ ಆರೋಪಿಯಾಗಿರುವ ಮುಕ್ತಾರ್, ಪ್ರಕರಣವೊಂದರಲ್ಲಿ ಬಂಧಿಸಿ ಕಾರಿನ ಮಹಜರಿಗೆ ಹೋಗಿದ್ದ ವೇಳೆ ಪರಾರಿಯಾಗಲು ಯತ್ನಿಸಿದ್ದಾನೆ. ಹೀಗಾಗಿ, ಈ ವೇಳೆ ಪೊಲೀಸರು ಆರೋಪಿ ಕಾಲಿಗೆ ಗುಂಡು ಹಾರಿಸಿದ್ದಾರೆ. ಸದ್ಯ ನಗರದ ಖಾಸಗಿ ಆಸ್ಪತ್ರೆಯಲ್ಲಿ ಮುಕ್ತಾರ್ ಗೆ ಚಿಕಿತ್ಸೆ ನೀಡಲಾಗುತ್ತಿದೆ.

ರೌಡಿಶೀಟರ್ ಮುಕ್ತಾರ್ ಹಲವು ಪ್ರಕರಣಗಳಲ್ಲಿ ಕಳೆದ ಐದು ವರ್ಷಗಳಿಂದ ಪೊಲೀಸರ ಕೈಗೆ ಸಿಗದೇ ತಪ್ಪಿಸಿಕೊಂಡಿದ್ದ. ಸದ್ಯ ಬಂಧಿಸಿದ್ದ ಪೊಲೀಸರು ಪ್ರಕರಣವೊಂದರ ಮಹಜರಿಗೆ ಕರೆದುಕೊಂಡು ಹೋಗುತ್ತಿದ್ದ ವೇಳೆ ಪರಾರಿಯಾಗಲು ಯತ್ನಿಸಿದ್ದ.

error: Content is protected !!