ಹುಬ್ಬಳ್ಳಿ ತಾರಿಹಾಳದಲ್ಲಿ ಭೀಕರ ಅಗ್ನಿ ದುರಂತ, ಮೂರಕ್ಕೇರಿದ ಮೃತರ ಸಂಖ್ಯೆ..!


ಹುಬ್ಬಳ್ಳಿ: ತಾರಿಹಾಳ ಕಾರ್ಖಾನೆಯಲ್ಲಿ ನಿನ್ನೆ ನಡೆದಿದ್ದ ಅಗ್ನಿ ದುರಂತದಲ್ಲಿ ಸಾವಿನ ಸಂಖ್ಯೆ ಮೂರಕ್ಕೆ ಏರಿಕೆಯಾಗಿದೆ. ಅಗ್ನಿ ಅವಘಡದಲ್ಲಿ ಗಾಯಗೊಂಡವರನ್ನು ಕಿಮ್ಸ್ ಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಇಂದು ಕಿಮ್ಸ್ ನಲ್ಲಿ ಚಿಕಿತ್ಸೆ ಫಲಿಸದೆ ಮತ್ತಿಬ್ಬರು ಸಾವು ಕಂಡಿದ್ದಾರೆ.

ಗೌರಮ್ಮ ಹಾಗೂ ಮಾಲೇಶ್ ಮೃತ ದುರ್ದೈವಿಗಳಾಗಿದ್ದು, ನಿನ್ನೆ ರಾತ್ರಿ ಚಿಕಿತ್ಸೆ ಫಲಿಸದೆ ವಿಜಯಲಕ್ಷ್ಮಿ ಸಾವನ್ನಪ್ಪಿದ್ದಳು.
ಚಿಕಿತ್ಸೆ ಫಲಕಾರಿಯಾಗದೆ ಒಟ್ಟು ಮೂವರು ಸಾವನ್ನಪ್ಪಿರೋದಾಗಿ ಕಿಮ್ಸ್ ನಿರ್ದೇಶಕ ಡಾ.ರಾಮಲಿಂಗಪ್ಪ ಮಾಹಿತಿ ನೀಡಿದ್ದಾರೆ.

ಇನ್ನುಳಿದ ಐವರು ಗಾಯಾಳುಗಳಿಗೆ ಕಿಮ್ಸ್ ನಲ್ಲಿ ಚಿಕಿತ್ಸೆ ಮುಂದುವರಿದಿದೆ. ಇನ್ನು ಸಾವು ಕಂಡಿರೋ ಮೂವರಿಗೂ ಶೇ.80 ರಿಂದ 90 ರಷ್ಟು ಸುಟ್ಟ ಗಾಯಗಳಾಗಿದ್ದವು.
ವೈದ್ಯರ ಸತತ ಪ್ರಯತ್ನದ ನಂತರವೂ ಚಿಕಿತ್ಸೆ ಫಲಿಸದೆ ಮೂವರೂ ಸಾವು ಕಂಡಿದ್ದಾರೆ.

error: Content is protected !!