ಗೊಬ್ಬರ ಸಿಂಪಡಿಸುವಾಗ ಕಚ್ಚಿದ ವಿಷಕಾರಿ ಸರ್ಪ, ಚಿಗಳ್ಳಿಯಲ್ಲಿ ಅನ್ನದಾತನ ದುರಂತ ಸಾವು..!

ಮುಂಡಗೋಡ: ತಾಲೂಕಿನ ಚಿಗಳ್ಳಿಯಲ್ಲಿ ವಿಷಕಾರಿ ಹಾವು ಕಚ್ಚಿ ರೈತ ಸಾವನ್ನಪ್ಪಿದ್ದಾನೆ. ಪಾಂಡುರಂಗ ಚೆನ್ನಾಪುರ(48) ಹಾವು ಕಚ್ಚಿ ಮೃತಪಟ್ಟ ರೈತನಾಗಿದ್ದಾನೆ.

ಇಂದು ಬೆಳಿಗ್ಗೆ ತನ್ನ ಗೋವಿನಜೋಳದ ಗದ್ದೆಯಲ್ಲಿ ಗೊಬ್ಬರ ಸಿಂಪಡಿಸುವ ವೇಳೆ ಆಕಸ್ಮಿಕವಾಗಿ ಹಾವು ಕಚ್ಚಿದೆ. ಹೀಗಾಗಿ, ತೀವ್ರ ಅಸ್ವಸ್ಥಗೊಂಡಿದ್ದ ರೈತನನ್ನು ಚಿಕಿತ್ಸೆಗಾಗಿ ಮುಂಡಗೋಡ ತಾಲೂಕಾಸ್ಪತ್ರೆಗೆ ದಾಖಲಿಸಲಾಗಿತ್ತು. ಆದ್ತೆ ಚಿಕಿತ್ಸೆ ಫಲಕಾರಿಯಾಗದೆ ರೈತ ಮೃತಪಟ್ಟಿದ್ದಾನೆ. ಮುಂಡಗೋಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

error: Content is protected !!