ಮುಂಡಗೋಡಿನಲ್ಲಿ ಕಾರ್ಗಿಲ್ ವಿಜಯ್ ದಿವಸ್ ಆಚರಣೆ..!


ಮುಂಡಗೋಡ: ಪಟ್ಟಣದ ಶಿವಾಜಿ ಸರ್ಕಲ್ ನಲ್ಲಿ ಕಾರ್ಗಿಲ್ ವಿಜಯ ದಿವಸ ಪ್ರಯುಕ್ತ ಛತ್ರಪತಿ ಶಿವಾಜಿ ಮಂಡಳದ ವತಿಯಿಂದ ಗೌರವ ಸಮರ್ಪಣೆ ಹಾಗೂ ಶೃದ್ಧಾಂಜಲಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಕಾರ್ಗಿಲ್ ವಿಜಯ್ ದಿವಸ್ ಅಂಗವಾಗಿ ದೇಶಭಕ್ತಿಯ ಘೋಷಣೆಗಳೊಂದಿಗೆ ನಿವೃತ್ತ ಯೋಧರಿಗೆ ಸನ್ಮಾನಿಸಲಾಯಿತು. ಹುತಾತ್ಮ ಯೋಧರಿಗೆ ಶೃದ್ಧಾಂಜಲಿ ಸಲ್ಲಿಸಲಾಯಿತು.

ಮಾಜಿ ಯೋಧರಾದ ಗಣಪತಿ ರವಳಪ್ಪನವರ್, ಯಲ್ಲಪ್ಪ ನಾಯ್ಕರ್, ಅಣ್ಣಪ್ಪ ಶಿಗ್ಗಾವಿ ಹಾಗೂ ಗಣಪತಿ‌ ಮಟ್ಟಿಮನಿ ಎಂಬುವರಿಗೆ ಶಾಲು ಹೊದಿಸಿ ಹಾರ ಹಾಕಿ ಸನ್ಮಾನಿಸಲಾಯಿತು. ಈ ವೇಳೆ ಹಲವು ಮುಖಂಡರು ಭಾಗಿಯಾಗಿದ್ರು.

error: Content is protected !!