ಸನವಳ್ಳಿ ಮಾರಿಕಾಂಬೆಯ ಆಭರಣ ಕದ್ದಿದ್ದ ಚಾಲಾಕಿ ಅರೆಸ್ಟ್, ಅಷ್ಟಕ್ಕೂ ಕಳ್ಳತನದ ಆರೋಪಿ ಯಾರು ಗೊತ್ತಾ..?


ಮುಂಡಗೋಡ ತಾಲೂಕಿನ ಸನವಳ್ಳಿ ಗ್ರಾಮದ ಶ್ರೀಮಾರಿಕಾಂಬಾದೇವಿ ದೇವಸ್ಥಾನದಲ್ಲಿ ನಡೆದಿದ್ದ ಕಳ್ಳತನ ಕೇಸ್ ಕೂಡ ಬಟಾ ಬಯಲಾಗಿದೆ. ಮುಂಡಗೋಡ ಪೊಲೀಸರ ಖಡಕ್ ತನಿಖೆಯಲ್ಲಿ ಆ ಗ್ರಾಮದಲ್ಲೇ ಅಡಗಿ ಕುಳಿತಿದ್ದ ಆರೋಪಿ ಸಿಕ್ಕಿಬಿದ್ದಿದ್ದಾನೆ. ಈ ಮೂಲಕ ಪಿಐ ಸಿದ್ದಪ್ಪ ಸಿಮಾನಿ ಹಾಗೂ ಪಿಎಸ್ ಐ ಬಸವರಾಜ್ ಮಬನೂರು ಕಳ್ಳತನದ ಕೇಸ್ ಬಯಲು ಮಾಡಿದ್ದಾರೆ.

ಮಳ್ಳನಂತಿದ್ದ ಕಳ್ಳ..!
ಅಸಲಿಗೆ, ಊರ ದೇವಿಯ ಆಭರಣವನ್ನೇ ಎಗರಿಸಿ ಮಳ್ಳನಂತೆ ಕುಳಿತಿದ್ದ, ಸನವಳ್ಳಿ ಗ್ರಾಮದ ಮಹಾಂತೇಶ್ ಅರ್ಜುನ್ ಆರೆಗೊಪ್ಪ ಎಂಬುವ ಆರೋಪಿ ಪೊಲೀಸರ ಅತಿಥಿಯಾಗಿದ್ದಾನೆ. ಈತನ ಬಗ್ಗೆ ಖಚಿತ ಸುಳಿವು ಸಿಕ್ಕ ಹಿನ್ನೆಲೆಯಲ್ಲಿ ತಕ್ಷಣವೇ ಕಾರ್ಯಪ್ರವೃತ್ತರಾಗಿದ್ದ ಪಿಎಸ್ಐ ಬಸವರಾಜ್ ಮಬನೂರು ಮಾಲು ಸಮೇತ ಆರೋಪಿಯ ಹೆಡೆಮುರಿ ಕಟ್ಟಿದ್ದಾರೆ.

ಅಂದಹಾಗೆ, ಜುಲೈ 26 ರಂದು ಸನವಳ್ಳಿ ಗ್ರಾಮದ ಗ್ರಾಮದೇವಿ ಮಾರಿಕಾಂಬೆ ದೇವಸ್ಥಾನದ ಬಾಗಿಲ ಬೀಗ ಮುರಿದು ದೇವಿಯ ಕೊರಳಲ್ಲಿದ್ದ ಸುಮಾರು 40 ಗ್ರಾಂ ಚಿನ್ನಾಭರಣ ಕಳ್ಳತನ ಮಾಡಲಾಗಿತ್ತು. ಈ ಬಗ್ಗೆ ಮುಂಡಗೋಡ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

error: Content is protected !!