ಮಂಗಳೂರಿನ ಸುರತ್ಕಲ್ ನಲ್ಲಿ ಮತ್ತೊಂದು ಬರ್ಬರ ಹತ್ಯೆ, ತಲವಾರನಿಂದ ಕೊಚ್ಚಿ ಯುವಕನ ಕೊಲೆ..!


ಮಂಗಳೂರು: ಬೆಳ್ಳಾರೆಯಲ್ಲಿ ಪ್ರವೀಣ್ ಕೊಲೆಯ ಬೆನ್ನಲ್ಲೇ ಮಂಗಳೂರಿನ ಸುರತ್ಕಲ್ ಸಮೀಪ ಯುವಕನ ಬರ್ಬರ ಹತ್ಯೆ ನಡೆದಿದೆ. ಸಿಎಂ ಬಸವರಾಜ್ ಬೊಮ್ಮಾಯಿ ಮಂಗಳೂರಿನಲ್ಲಿ ಇದ್ದಾವಾಗಲೇ ಮತ್ತೊಂದು ಹೆಣ ಬಿದ್ದಿದೆ.

ಹತ್ಯೆಯಾದ ಫಾಝಿಲ್

ಅಂಗಡಿಗೆ ನುಗ್ಗಿದ ದುಷ್ಕರ್ಮಿಗಳು ಯುವಕನಿಗೆ ಹಿಗ್ಗಾಮುಗ್ಗಾ ದಾಳಿ ನಡೆಸಿ ಕೊಚ್ಚಿ ಹಾಕಿದ್ದಾರೆ. ಹಲ್ಲೆಗೊಳಗಾಗಿ ಮೃತಪಟ್ಟಿರೋ ಯುವಕನನ್ನು ಸುರತ್ಕಲ್ ಮಂಗಳಪೇಟೆ ನಿವಾಸಿ ಮೊಹಮ್ಮದ್ ಫಾಝಿಲ್ ಎಂದು ಗುರುತಿಸಲಾಗಿದೆ.

ಚಪ್ಪಲಿ ಖರೀದಿಗೆ ಬಂದಿದ್ದ ಫಾಝಿಲ್ ಮೇಲೆ ಕಾರಿನಲ್ಲಿ ಬಂದಿದ್ದ ನಾಲ್ಕು ಜನ ದುಷ್ಕರ್ಮಿಗಳಿಂದ ದಾಳಿ ನಡೆದಿದೆ. ಅಂಗಡಿಯ ಎದುರಿನ ಜಗಲಿಯಲ್ಲೇ ತಲವಾರಿನಿಂದ ದಾಳಿ ನಡೆಸಿ ದುಷ್ಕರ್ಮಿಗಳು ಪರಾರಿಯಾಗಿದ್ದಾರೆ. ತಪ್ಪಿಸಿಕೊಳ್ಳಲು ಯತ್ನಿಸಿದರು ಸಾಧ್ಯವಾಗಲಿಲ್ಲ.

ಭಾರೀ ಪ್ರಮಾಣದಲ್ಲಿ ರಕ್ತ ಸ್ರಾವ ವಾಗಿದ್ದು, ಗಂಭೀರ ಸ್ಥಿತಿಯಲ್ಲಿದ್ದ ಫಾಝಿಲ್ ನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು, ಆದ್ರೆ, ಚಿಕಿತ್ಸೆ ಫಲಕಾರಿಯಾಗದೇ ಅವನ್ನಪ್ಪಿದ್ದಾನೆ ಎನ್ನಲಾಗಿದೆ. ಆದ್ರೆ ಈ ಭೀಕರ ಹತ್ಯೆಗೆ ಕಾರಣ ಏನು ಅಂತಾ ಇನ್ನು ತಿಳಿದು ಬಂದಿಲ್ಲ ಅನ್ನುವ ಮಾಹಿತಿ ಲಭ್ಯವಾಗಿದೆ.

ಸ್ಥಳದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದ್ದು ಹೆಚ್ಚಿನ ಪೊಲೀಸ್ ಭದ್ರತೆ ಕೈಗೊಳ್ಳಲಾಗಿದೆ. 4 ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಬಜ್ಪೆ, ಪಣಂಬೂರು, ಮುಲ್ಕಿ ಮತ್ತು ಸುರತ್ಕಲ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಯಾಗಿದೆ. ಪೊಲೀಸರು ಸಿಸಿಟಿವಿ ಪರಿಶೀಲನೆ ನಡೆಸುತ್ತಿದ್ದಾರೆ.

error: Content is protected !!