ಬೆಂಗಳೂರು: ಕರ್ನಾಟಕದಲ್ಲಿ ಮತ್ತೆ ಮಹಾಮಳೆಯ ಗಂಡಾಂತರ ಶುರುವಾಗಲಿದೆಯಾ ಅನ್ನೋ ಆತಂಕ ಶುರುವಾಗಿದೆ. ಕರ್ನಾಟಕ ಸೇರಿದಂತೆ ದೇಶದ ಹಲವು ರಾಜ್ಯಗಳಲ್ಲಿ ಆ.1ರ ಅವಧಿಯೊಳಗೆ ಭಾರೀ ಮಳೆ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮತ್ತೆ ಎಚ್ಚರಿಸಿದೆ.
ಉತ್ತರ ಪ್ರದೇಶ, ರಾಜಸ್ಥಾನ, ಮಹಾರಾಷ್ಟ್ರ, ಜಾರ್ಖಂಡ, ಬಿಹಾರ ಹಾಗೂ ಜಮ್ಮು- ಕಾಶ್ಮೀರ ಕೇಂದ್ರಾಡಳಿತ ಪ್ರದೇಶಗಳಲ್ಲಿ ವ್ಯಾಪಕ ಮಳೆಯಾಗಿದೆ.
ಆದರೆ ಕರ್ನಾಟಕ, ತಮಿಳುನಾಡು, ಪಂಜಾಬ್, ಹರಿಯಾಣಾ, ಹಿಮಾಚಲಪ್ರದೇಶ, ಉತ್ತರಾಖಂಡ ಹಾಗೂ ಹಿಮಾಚಲ ಪ್ರದೇಶದಲ್ಲಿ ಕೇಂದ್ರೀಕೃತ ಮೋಡಗಳಿಂದ ಭೀಕರ ಪ್ರಮಾಣದ ಮಳೆ ಬೀಳುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ವರದಿಗಳು ತಿಳಿಸಿವೆ.