ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 10 ದಿನದಲ್ಲಿ ಬರೋಬ್ಬರಿ 3 ಕೊಲೆಗಳಾಗಿದೆ. ಇಡೀ ಜಿಲ್ಲೆಯಾದ್ಯಂತ ಪರಿಸ್ಥಿತಿ ಉದ್ವಿಗ್ನವಾಗಿದೆ. ಇದರಿಂದಾಗಿ ಶ್ರೀರಾಮಸೇನೆಯ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ದಕ್ಷಿಣ ಕನ್ನಡ ಜಿಲ್ಲಾ ಪ್ರವೇಶಕ್ಕೆ ನಿರ್ಬಂಧ ವಿಧಿಸಲಾಗಿದೆ. ಆದರೆ ನಿರ್ಬಂಧವಿದ್ದರೂ ನಗರಕ್ಕೆ ಬಂದ ಪ್ರಮೋದ್ ಮುತಾಲಿಕ್ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.