ವಾಷಿಂಗ್ಟನ್: ವಿಶ್ವದ ಮೋಸ್ಟ್ ವಾಂಟೆಡ್ ಉಗ್ರ ಅಲ್ ಖೈದಾ ಸಂಘಟನೆಯ ನಾಯಕ ಅಮ್ಮಾನ್ ಅಲ್ ಜವಾಹಿರಿಯನ್ನು ಅಮೆರಿಕದ ವಾಯುಪಡೆ ಸೋಮವಾರ ತಡರಾತ್ರಿ ಕಾರ್ಯಾಚರಣೆ ನಡೆಸಿ ಹತ್ಯೆಗೈದಿದೆ.
ಈ ಕಾರ್ಯಾಚರಣೆಯ ಕುರಿತು ಅಮೆರಿಕ ಅಧ್ಯಕ್ಷ ಜೋ ಬಿಡೆನ್ ಸೋಮವಾರ ತಡರಾತ್ರಿ ಸ್ಪಷ್ಟಪಡಿಸಿದ್ದು, ವಿಶ್ವದ ಮೋಸ್ಟ್ ವಾಂಟೆಡ್ ಭಯೋತ್ಪಾದಕರಲ್ಲಿ ಒಬ್ಬನಾಗಿದ್ದ ಮತ್ತು ಸೆಪ್ಟೆಂಬರ್ 11, 2001 ರ ದಾಳಿಯ ಮಾಸ್ಟರ್ ಮೈಂಡ್ ಆಗಿದ್ದ ಅಲ್-ಖೈದಾ ಮುಖ್ಯಸ್ಥ ಅಮ್ಮನ್ ಅಲ್-ಜವಾಹಿರಿಯನ್ನು ಯುನೈಟೆಡ್ ಸ್ಟೇಟ್ಸ್ ಹೊಡೆದುರುಳಿಸಿದೆ ಎಂದು ಹೇಳಿದ್ದಾರೆ.ಜಗತ್ತಿಗೆ ಕಂಟಕವಾಗಿರುವ ಭಯೋತ್ಪಾದನೆಯನ್ನು ಬೇರುಸಹಿತ ಕಿತ್ತೊಗೆಯುವುದಾಗಿ ಹೇಳಿದ್ದಾರೆ.
ದೂರದರ್ಶನದ ಭಾಷಣದಲ್ಲಿ ಅಧ್ಯಕ್ಷ ಬಿಡೆನ್ ಮಾತನಾಡಿ, ಅಫ್ಘಾನಿಸ್ತಾನದ ಕಾಬೂಲ್‌ನಲ್ಲಿ ಶನಿವಾರ ಸ್ಟೈಕ್ ನಡೆಸಲಾಯಿತು. ಯಾವುದೇ ನಾಗರಿಕ ಸಾವುನೋವುಗಳು ಸಂಭವಿಸಿಲ್ಲ. ವಾಯುಪಡೆ ನಿಖರ ದಾಳಿ ನಡೆಸಿ ಭಯೋತ್ಪಾದಕನನ್ನು ಹತ್ಯೆಗೈದಿವೆ ಎಂದಿದ್ದಾರೆ.
ಅಲ್ ಖೈದಾ ನಾಯಕ ಅಹ್ಮಾನ್ ಅಲ್-ಜವಾಹಿರಿ ಹತ್ಯೆಯ ಕುರಿತು ಯುಎಸ್ ಅಧ್ಯಕ್ಷ ಜೋ ಬಿಡೆನ್ ಅವರ ಘೋಷಣೆಯನ್ನು ಸೌದಿ ಅರೇಬಿಯಾ ಸ್ವಾಗತಿಸಿದೆ. ಆ ಮೂಲಕ ಇಸ್ಲಾಂ ಮೂಲಭೂತವಾದಿಗಳಿಗೆ ಹಾಗೂ ಭಯೋತ್ಪಾದಕ ಸಂಘಟನೆಗಳಿಗೆ ತೀವ್ರ ಹಿನ್ನಡೆಯಾಗಿದೆ.